Belagavi NewsBelgaum NewsKannada NewsKarnataka NewsLatest
*BREAKING: ಬೆಳಗಾವಿಯಲ್ಲಿ ಘೋರ ದುರಂತ: ಸಿಮೆಂಟ್ ಲಾರಿ ಪಲ್ಟಿಯಾಗಿ ಬಿದ್ದು ವಿದ್ಯಾರ್ಥಿ ಸಾವು*

ಪ್ರಗತಿವಾಹಿನಿ ಸುದ್ದಿ: ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿ ಮೇಲೆ ಸಿಮೆಂಟ್ ಲಾರಿ ಪಲ್ಟಿಯಾಗಿ ಬಿದ್ದು, ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಳಗಾವಿ ಜಿಲ್ಲೆಯ ಹಾರೂಗೇರಿ ಬಳಿ ನಡೆದಿದೆ. ಕುಡುಚಿಕಡೆಯಿಂದ ಹಾರೂಗೇರಿ ಕಡೆಗೆ ಹೊರಟಿದ್ದ ಸಿಮೆಂಟ್ ಲಾರಿ ತಿರುವುನಲ್ಲಿ ಪಲ್ಟಿಯಾಗಿ ಶಾಲೆಗೆ ಹೋಗುತ್ತಿದ್ದ ಮಕ್ಕಳ ಮೇಲೆ ಬಿದ್ದಿದೆ.
ದುರಂತದಲ್ಲಿ 5 ನೇ ತರಗತಿ ವಿದ್ಯಾರ್ಥಿ 11 ವರ್ಷದ ಅಮಿತ್ ಕಾಂಬಳೆ ಸಾವನ್ನಪ್ಪಿದ್ದಾನೆ. ಅಂಜಲಿ ಕಾಂಬಳೆ (15) ಹಾಗೂ ಅವಿನಾಶ್ ಕಾಂಬಳೆ (14) ಗಂಭೀರವಾಗಿ ಗಾಯಗೊಂಂಡಿದ್ದಾರೆ. ಕುಡುಚಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.




