ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ವಿಮಾನ ನಿಲ್ದಾಣ, ಹಾಗೂ ವಿಮಾನಗಳಲ್ಲಿ ಪರಿಶೀಲನೆ ನಡೆಸಲಾಗಿದೆ.
ಚೆನ್ನೈನಿಂದ-ಬೆಳಗಾವಿಗೆ ಬರುವ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂದು ಬೆಳಗಾವಿ ವಿಮಾನ ನಿಲ್ದಾಣ ಅಥಾರಿಟಿಗೆ ಇ-ಮೇಲ್ ಮೂಲಕ ಸಂದೇಶ ಬಂದಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿಗೆ ಚನ್ನೈನಿಂದ ಬರುವ ವಿಮಾನ ಸಂಪರ್ಕ ಕಡಿತಗೊಳಿಸಲಾಗಿದೆ.
ಬಾಂಬ್ ಬೆದರಿಕೆ ಬಗ್ಗೆ ಬೆಳಗಾವಿ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇ-ಮೇಲ್ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ