Uncategorized

ಬೆಳಗಾವಿಗೂ ಕಾಡಿದ ನೀಟ್ ಹಗರಣ: ಕೋಟ್ಯಂತರ ರೂ ಎಗರಿಸಿ ಪರಾರಿಯಾಗಿದ್ದ ಆರೋಪಿ ಅರೆಸ್ಟ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ದೇಶದಲ್ಲೆಡೆ ಸದ್ದು ಮಾಡಿದ್ದ ನೀಟ್ ಪರೀಕ್ಷೆ ಅಕ್ರಮ ಒಂದು ಕಡೆಯಾದರೆ, ಇದನ್ನೇ ಬಂಡವಾಳ ಮಾಡಿಕೊಂಡ ಐನಾತಿ ಓರ್ವ ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿ, ಕೋಟ್ಯಾಂತರ ರೂಪಾಯಿ ಎಗರಿಸಿ ಪರಾರಿಯಾಗಿದ್ದ. ಈ ಅಂತರಾಜ್ಯ ಖದೀಮನನ್ನು ಬೆಳಗಾವಿಯ ಮಾರ್ಕೆಟ್ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.‌

Home add -Advt

ನೀಟ್ ಪರೀಕ್ಷೆಯಲ್ಲಿ ಪಾಸ್ ಮಾಡಿಸಿ, ಎಂಬಿಬಿಎಸ್ ಸೀಟ್ ಕೊಡಿಸುವದಾಗಿ ನಂಬಿಸಿ ಸುಮಾರು 10 ಕ್ಕೂ ಹೆಚ್ಚು ಜನರಿಗೆ ಮೋಸ ಮಾಡಿದ್ದಾನೆ. ಅವರಿಂದ ಸುಮಾರು 1,30,41,884 ರೂಪಾಯಿ ಎಗರಿಸಿ ಪರಾರಿಯಾಗಿದ್ದಾನೆ. ಇದರ ಜಾಡು ಹೀಡಿದ ಪೊಲೀಸರ ತಂಡ ಆರೋಪಿಯನ್ನು ಮಹಾರಾಷ್ಟ್ರದ  ಮುಂಬೈನಲ್ಲಿ ಪತ್ತೆ ಹಚ್ಚಿ ಅರೆಸ್ಟ್ ಮಾಡಿದ್ದಾರೆ.

ಕಂತೆ ಕಂತೆ ನೋಟುಗಳು, ಲ್ಯಾಪ್ ಟಾಪ್, ಮೋಬೈಲ್ ಫೋನ್ ಹಾಗೂ ಕಂಪ್ಯೂಟರ್ ಗಳನ್ನು ಇಟ್ಟಿಕೊಂಡ ತೇಲಂಗಾಣ ಮೂಲದ ಅರಗೊಂಡ ಅರವಿಂದ ಅಲಿಯಾಸ್ ಅರುಣಕುಮಾರ (43) ಖಂದೀಮನನ್ನು ಬಂಧಿಸಿರುವ ಪೊಲೀಸರು ಅವನಿಂದ 12 ಲಕ್ಷ ಹಣ ಹಾಗೂ 12,66,900 ಬೆಲೆಯ ವಸ್ತುಗಳನ್ನು ಸೀಜ್ ಮಾಡಿದ್ದಾರೆ.

Related Articles

Back to top button