Belagavi NewsBelgaum NewsKannada NewsKarnataka News

*ಬೆಳಗಾವಿಯಲ್ಲಿ ಭೀಕರ ಸರಣಿ ಅಪಘಾತ: ಮೂವರು ಸಾವು*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ಬಣಜವಾಡ ಬಳಿಯ ವಿಜಯಪುರ-ಸಂಕೇಶ್ವರ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ. ಲಾರಿ, ಪಿಕಪ್ ವಾಹನ, ಇನೋವಾ ಹಾಗೂ ಸ್ಕಾರ್ಪಿಯೋ ನಡುವೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

Home add -Advt

ಮೃತರನ್ನು ಮಹಾರಾಷ್ಟ್ರ ಮೂಲದ ಮಹೇಶ್ ಸುಭಾಷ್ ಗಾತಾಡೆ (30), ಶಿರೋಳದ ಶಿವಂ ಯುವರಾಜ್ (24) ಹಾಗೂ ಸಾಂಗ್ಲಿ ಮೂಲದ ಮೀರಜ್ ನ ಸಚಿನ್ ಮಾಳಿ ಎಂದು ಗುರುತಿಸಲಾಗಿದೆ.

ಗಾಯಾಳುಗಳನ್ನು ಅಥಣಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಥಣಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.


Related Articles

Back to top button