ಪ್ರಗತಿವಾಹಿನಿ ಸುದ್ದಿ; ಬೆಳಗಾವಿ; ಅಗ್ನಿಪಥ್ ಯೋಜನೆ ವಿರೋಧಿಸಿ ಇಂದು ಬೆಳಗಾವಿ ಬಂದ್ ಗೆ ಕರೆ ನೀಡಲಾಗಿದ್ದು, ಪ್ರತಿಭಟನೆಗಳು ತೀವ್ರಗೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜಿಲ್ಲೆಯಾದ್ಯಂತ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.
ಬೆಳಗಾವಿಯಲ್ಲಿ ಅಗ್ನಿಪಥ್ ಯೋಜನೆ ವಿರೋಧಿಸಿ ಎರಡು ಮೂರು ದಿನಗಳಿಂದ ಯುವಕರು ಪ್ರತಿಭಟನೆ ನಡೆಸುತ್ತಲೇ ಇದ್ದಾರೆ. ಇಂದು ಜಿಲ್ಲಾ ಬಂದ್ ಗೆ ಕರೆ ನೀಡಿದ್ದು, ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಯಾವುದೇ ಸಮಯದಲ್ಲಾದರೂ ಪ್ರತಿಭಟನಾಕಾರರ ಕಿಚ್ಚು ತಾರಕಕ್ಕೇರುವ ಸಾಧ್ಯತೆ ಹೆಚ್ಚಿದೆ.
ಬಂದ್ ಹಿನ್ನೆಲೆಯಲ್ಲಿ ಬಾಗಲಕೋಟೆ, ಧಾರವಾಡ ಜಿಲ್ಲೆಯ ಯುವಕರೂ ಬೆಳಗಾವಿಗೆ ಆಗಮಿಸುವ ಸಾಧ್ಯತೆ ಇದೆ.
ಬೆಳಗಾವಿ ಚಲೋ ಮಹಾ ಆಂದೋಲನದ ಮೂಲಕ ಅಗ್ನಿಪಥ್ ಯೋಜನೆ ಹಿಂಪಡೆಯುವಂತೆ ಒತ್ತಾಯಿಸಲಿದ್ದಾರೆ.
ಬಂದ್ ಕರೆ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸರು ಹೈಅಲರ್ಟ್ ಘೋಷಿಸಿದ್ದು, ನಗರದ ಬೀದಿ ಬೀದಿಗಳಲ್ಲಿ ಪಥಸಂಚಲನ ನಡೆಸಿದ್ದಾರೆ. ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ನೇತೃತ್ವದಲ್ಲಿ ಪೊಲೀಸರು ಹಾಗೂ ಕ್ಷಿಪ್ರ ಕಾರ್ಯಪಡೆ ತಂಡ ಚೆನ್ನಮ್ಮ ವೃತ್ತದಿಂದ ಪಥಸಂಚಲನ ನಡೆಸಿದೆ. ಡ್ರೋಣ್ ಕ್ಯಾಮರಾ ಬಳಸಿ ಚಿತ್ರೀಕರಣ ನಡೆಸಿದ್ದಾರೆ.
KSRTC ಬಸ್-ಕಾರು ಡಿಕ್ಕಿ; ಇಬ್ಬರ ದುರ್ಮರಣ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ