Belagavi NewsBelgaum NewsKarnataka News
*ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು*


ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಬಾಣಂತಿಯರ ಸಾವಿನ ಸರಣಿ ಮುಂದುವರೆದಿದೆ. ಬೆಳಗಾವಿ ಜಿಲ್ಲೆಯ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದಾರೆ.
ಅಂಜಲಿ (31) ಮೃತ ಬಾಣಂತಿ. ಬೆಳಗಾವಿಯ ನಿಲಜಿ ಗ್ರಾಮದ ನಿವಾಸಿಯಾಗಿದ್ದ ಅಂಜಲಿ ಹೆರಿಗೆಗೆಂದು ಆಸ್ಪತ್ರೆಗೆ ಬಂದಿದ್ದರು. ಬಾಣಂತಿಯಾದ ಬಳಿಕ ಲೋ ಬಿಪಿಯಾಗಿದ್ದು, ಚಿಕಿತ್ಸೆ ಫಲಿಸದೇ ಅಂಜಲಿ ಸಾವನ್ನಪ್ಪಿದ್ದಾರೆ.


