GIT add 2024-1
Laxmi Tai add
Beereshwara 33

*ಜಗದೀಶ್ ಶೆಟ್ಟರ್ ವಿರುದ್ಧ ಒಂದಾದ ಬೆಳಗಾವಿ ಬಿಜೆಪಿ!* *ಸಂಘ ಪರಿವಾರದಿಂದ ಸಹ ವಿರೋಧ*

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಥಳೀಯರಿಗೇ ಟಿಕೆಟ್ ಕೊಡಬೇಕು ಎಂದು ಜಿಲ್ಲೆಯ ಬಿಜೆಪಿ ನಾಯಕರು ಒಕ್ಕೊರಲಿನಿಂದ ಆಗ್ರಹಿಸಿದ್ದಾರೆ.

ತನ್ಮೂಲಕ ಮಾಜಿ ಮುಖ್ಯಮಂತ್ರಿ, ಜಗದೀಶ ಶೆಟ್ಟರ್, ಮಾಜಿ ಸಚಿವ ಮುರುಗೇಶ ನಿರಾಣಿ ಸೇರಿದಂತೆ ಹೊರಗಿನವರಿಗೆ ಟಿಕೆಟ್ ನೀಡುವುದಕ್ಕೆ ಸ್ಪಷ್ಟವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.

ಜಗದೀಶ್ ಶೆಟ್ಟರ್ ಅಥವಾ ಮುರುಗೇಶ ನಿರಾಣಿಗೆ ಬೆಳಗಾವಿ ಕ್ಷೇತ್ರದ ಟಿಕೆಟ್ ನೀಡಲಾಗುತ್ತದೆ ಎನ್ನುವ ಮಾಹಿತಿ ಹಿನ್ನೆಲೆಯಲ್ಲಿ ದಿಢೀರ್ ಸಭೆ ಸೇರಿದ ಜಿಲ್ಲೆಯ ನಾಯಕರು, ಹೊರಗಿನವರಿಗೆ ಟಿಕೆಟ್ ನೀಡುವುದಕ್ಕೆ ತೀವ್ರವಾಗಿ ಆಕ್ಷೇಪಿಸಿದರು.

ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ರಾಜ್ಯಸಭೆಯ ಮಾಜಿ ಸದಸ್ಯ ಡಾ.ಪ್ರಭಾಕರ ಕೋರೆ, ವಿಧಾನ ಪರಿಷತ್ ಮಾಜಿ ಸಚೇತಕ ಮಹಾಂತೇಶ ಕವಟಗಿಮಠ, ಬಿಜೆಪಿ ರಾಜ್ಯ ಉಪಾಧ್ಯಕ್ಷ, ಮಾಜಿ ಶಾಸಕ ಅನಿಲ ಬೆನಕೆ, ಶಾಸಕ ಅಭಯ ಪಾಟೀಲ, ವಕ್ತಾರ ಎಂ.ಬಿ.ಜಿರಲಿ, ಮಾಜಿ ಶಾಸಕ ವಿಶ್ವನಾಥ ಪಾಟೀಲ, ವಿರೂಪಾಕ್ಷ ಮಾಮನಿ, ಮಾಜಿ ಮಹಾನಗರ ಅಧ್ಯಕ್ಷ ರಾಜೇಂದ್ರ ಹರಕುಣಿ ಮೊದಲಾದವರು ಸಭೆಯಲ್ಲಿ ಭಾಗವಹಿಸಿದ್ದರು.

ಹೊರಗಿನವರಿಗೆ ಟಿಕೆಟ್ ನೀಡಲಾಗುತ್ತದೆ ಎನ್ನುವ ಮಾಹಿತಿ ಬರುತ್ತಿದ್ದಂತೆ ಜಿಲ್ಲೆಯ ಸಾರ್ವಜನಿಕರು, ಜಿಲ್ಲೆಯ ಬಿಜೆಪಿಯಲ್ಲಿ ಯಾರೂ ಗಂಡಸರಿಲ್ಲವೇ ಎನ್ನುವ ಪ್ರಶ್ನೆಯನ್ನು ಕೇಳುತ್ತಿದ್ದಾರೆ. ಹೊರಗಿನವರು ಸ್ಫರ್ಧಿಸುವದಕ್ಕೆ ಕಾರ್ಯಕರ್ತರಿಂದಲೂ ತೀವ್ರ ವಿರೋಧ ವ್ಯಕ್ತವಾಗುತ್ತಿದೆ ಎನ್ನುವ ಸಂದೇಶವನ್ನು ರಾಜ್ಯ ಮತ್ತು ರಾಷ್ಟ್ರೀಯ ನಾಯಕರಿಗೆ ಕಳಿಸಲು ಸಭೆಯಲ್ಲಿ ನಿರ್ಧರಿಸಿದರು.

Emergency Service

ರಾಷ್ಟ್ರೀಯ ನಾಯಕರಿಗೆ ಈರಣ್ಣ ಕಡಾಡಿ ಮತ್ತು ರಾಜ್ಯ ನಾಯಕರಿಗೆ ಅನಿಲ ಬೆನಕೆ ಸಂದೇಶ ರವಾನಿಸಬೇಕು ಎಂದು ನಿರ್ಣಯಿಸಲಾಯಿತು.

ಈ ಮಧ್ಯೆ, ಹಾಲಿ ಸಂಸದೆ ಮಂಗಲಾ ಅಂಗಡಿ ಕೂಡ ಜಗದೀಶ್ ಶೆಟ್ಟರ್ ಸ್ಪರ್ಧೆಗೆ ಅಸಮಾಧಾನ ಹೊರಹಾಕಿದ್ದಾರೆ. ನನಗೆ ಅಥವಾ ನನ್ನ ಮಗಳಿಗೆ ಟಿಕೆಟ್ ಸಿಗುತ್ತದೆ ಎನ್ನುವ ನಿರೀಕ್ಷೆ ಇತ್ತು, ಆದರೆ ಜಗದೀಶ್ ಶೆಟ್ಟರ್ ಗೆ ಕೊಡುವುದಾಗಿ ವರಿಷ್ಠರು ಹೇಳಿದ್ದಾರೆ ಎಂದು ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ದಿಢೀರ್ ದೆಹಲಿಗೆ ತೆರಳಿದ್ದ ಮಂಗಲಾ ಅಂಗಡಿ, ತಮಗೆ ಟಿಕೆಟ್ ಸಿಗುವುದಿಲ್ಲ ಎನ್ನುವುದನ್ನು ಖಚಿತಪಡಿಸಿಕೊಂಡು ವಾಪಸ್ಸಾಗಿದ್ದಾರೆ. ಜಗದೀಶ್ ಶೆಟ್ಟರ್ ಗೆ ಬೆಳಗಾವಿ ಟಿಕೆಟ್ ನೀಡುವುದಾಗಿ ವರಿಷ್ಠರು ತಿಳಿಸಿದ್ದಾರೆ ಎಂದು ಅವರು ತಿಳಿಸಿದರು.

ಸ್ಥಳೀಯವಾಗಿ ಹಲವು ಆಕಾಂಕ್ಷಿಗಳಿದ್ದರೂ ಹೊರಗಿನವರಿಗೆ ಟಿಕೆಟ್ ನೀಡುವ ನಿರ್ಧಾರಕ್ಕೆ ಬಿಜೆಪಿ ಸ್ಥಳೀಯ ನಾಯಕರು ತೀವ್ರವಾಗಿ ವಿರೋಧಿಸಿದ್ದಾರೆ.

ಈ ಮಧ್ಯೆ, ಸಂಘಪರಿವಾರದ ನಾಯಕರು ಸಹ ಹೊರಗಿನವರಿಗೆ ಟಿಕೆಟ್ ನೀಡುವುದಕ್ಕೆ ಅಸಮ್ಮತಿ ವ್ಯಕ್ತಪಡಿಸಿ ಸಂದೇಶ ರವಾನಿಸಿದ್ದಾರೆ ಎಂದು ಸುದ್ದಿ ಮೂಲಗಳು ತಿಳಿಸಿವೆ.

Bottom Add3
Bottom Ad 2