Belagavi NewsBelgaum NewsKarnataka NewsLatest
*ತಮ್ಮನ ಸಾವಿನ ಸುದ್ದಿಕೇಳಿ ಅಣ್ಣ ಹೃದಯಾಘಾತದಿಂದ ಸಾವು: ಮರಣದಲ್ಲಿಯೂ ಒಂದಾದ ಸಹೋದರರು*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ತಮ್ಮ ಅನಾರೋಗ್ಯದಿಂದ ಸಾವನ್ನಪ್ಪಿದ ಸುದ್ದಿ ಕೇಳಿ ಆಘಾತಗೊಂಡ ಅಣ್ಣ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಅನಾರೋಗ್ಯದಿಂದ 16 ವರ್ಷದ ಸತೀಶ್ ಬಾಗನ್ನವರ್ ಮೃತಪಟ್ಟಿದ್ದ. ತಮ್ಮನ ಅಕಾಲಿಕ ಮರಣದ ಸುದ್ದಿ ಕೇಳಿ ಆಘಾತಗೊಂಡಿದ್ದ ಅಣ್ಣ ಬಸವರಾಜ್ (24) ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.
ಇಬ್ಬರು ಮಕ್ಕಳನ್ನು ಕಳೆದುಕೊಂಡಿರುವ ತಂದೆ-ತಾಯಿಯ ಆಕ್ರಂದನ ಮುಗಿಲುಮುಟ್ಟಿದೆ. ಸಹೋದರರಿಬ್ಬರೂ ಸಾವಿನಲ್ಲಿಯೂ ಒಂದಾಗಿದ್ದಾರೆ.