Latest

ಕೃಷ್ಣಾ ನದಿಗೆ ನೀರು: ಮಹಾರಾಷ್ಟ್ರಕ್ಕೆ ತೆರಳಿದ ಕೋರೆ ನೇತೃತ್ವದ ನಿಯೋಗ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ಕೃಷ್ಣಾ ನದಿಗೆ ನೀರು ಬಿಡುವಂತೆ ಮಹಾರಾಷ್ಟ್ರವನ್ನು ಒತ್ತಾಯಿಸಲು ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ ಕೋರೆ ನೇತೃತ್ವದ ನಿಯೋಗ ಮುಂಬೈಗೆ ತೆರಳಿದೆ.

Home add -Advt

ಸಂಜೆ 4 ಗಂಟೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಲಿರುವ ನಿಯೋಗ ಕೃಷ್ಣಾ ತೀರದಲ್ಲಿನ ಪರಿಸ್ಥಿತಿಯನ್ನು ವಿವರಿಸಿ, ತಕ್ಷಣ ನೀರು ಬಿಡುಗಡೆ ಮಾಡುವಂತೆ ಮನವಿ ಮಾಡಲಿದೆ.

ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಮಾಜಿ ಸಚಿವ ಲಕ್ಷ್ಮಣ ಸವದಿ, ಶಾಸಕರಾದ ಶಶಿಕಲಾ ಜೊಲ್ಲೆ, ಪಿ.ರಾಜೀವ, ದುರ್ಯೋಧನ ಐಹೊಳೆ, ಮುಖಂಡರಾದ ಅಣ್ಣಾಸಾಹೇಬ ಜೊಲ್ಲೆ, ರಾಜು ಕಾಗೆ, ಸಿದ್ದು ಸವದಿ ಮೊದಲಾದವರು ನಿಯೋಗದಲ್ಲಿ ಇರಲಿದ್ದಾರೆ.

Related Articles

Back to top button