Belagavi NewsBelgaum NewsKannada NewsKarnataka NewsLatest
*ಬೆಳಗಾವಿ: ಕಾರಿನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಇಟ್ಟ ಪತ್ನಿ*

ಪ್ರಗತಿವಾಹಿನಿ ಸುದ್ದಿ: ಗಂಡ-ಹೆಂಡತಿ ನಡುವೆ ಆರಂಭವಾದ ಜಗಳ ವಿಕೋಪಕ್ಕೆ ತಿರುಗಿದ್ದು ಕೋಪಗೊಂಡ ಪತ್ನಿ ಕಾರಿಗೆ ಪೆಟ್ರೋಲ್ ಸುರಿದು ಬೆಂಕಿ ಇಟ್ಟಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಪೊಗತ್ಯಾನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶಿವನಗೌಡ ಪಾಟೀಲ್ ಹಾಗೂ ಪತ್ನಿ ಸಾವಿತ್ರಿ ನಡುವೆ ಆಗಾಗ ಆಸ್ತಿ ಹಾಗೂ ಹಣಕಾಸಿನ ವಿಚಾರವಾಗಿ ಗಲಾಟೆ ನಡೆಯುತ್ತಿತ್ತು. ಇದೇ ವಿಚಾರವಾಗಿ ಇಂದು ಇಬ್ಬರ ನಡುವೆ ಮತ್ತೆ ವಾಗ್ವಾದ, ಜಗಳ ಶುರುವಾಗಿದೆ. ಇಬ್ಬರ ನಡುವೆ ಕೋಪ ವಿಕೋಪಕ್ಕೆ ತಿರುಗಿದ್ದು, ಪತ್ನಿ ಸಾವಿತ್ರಿ ಪೆಟ್ರೋಲ್ ತೆಗೆದುಕೊಂಡು ಬಂದು ಕಾರಿನ ಮೇಲೆ ಸುರಿದು ಬೆಂಕಿ ಹಚ್ಚಿದ್ದಾಳೆ.
ಮನೆ ಮುಂದೆ ನಿಲ್ಲಿಸಿದ್ದ ಕಾರು ಬೆಂಕಿಯಲ್ಲಿ ಧಗ ಧಗನೆ ಹೊತ್ತಿ ಉರಿದಿದೆ. ನೋಡ ನೋಡುತ್ತಿದ್ದಂತೆಯೇ ಕಾರು ಸಂಪೂರ್ಣ ಸುಟ್ಟು ಕರಕಾಲಾಗಿದೆ. ಪತ್ನಿಯ ಆಕ್ರೋಶಕ್ಕೆ ಕಾರು ಸಂಪೂರ್ಣ ಭಸ್ಮವಾಗಿದ್ದು ಪತಿ ಗೋಳಾಡಿದ್ದಾನೆ.