Belagavi NewsBelgaum NewsKarnataka NewsSports

*ಬೆಳಗಾವಿಯಲ್ಲಿ ಸಿಬಿಎಸ್‌ಇ ರಾಷ್ಟ್ರೀಯ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ಗೆ ಅದ್ಧೂರಿ ಚಾಲನೆ*

28 ರಾಜ್ಯಗಳು, 8 ಕೇಂದ್ರಾಡಳಿತ ಪ್ರದೇಶಗಳು, 7 ದೇಶಗಳ 1,200ಕ್ಕೂ ಅಧಿಕ ಸ್ಕೇಟರ್‌ಗಳು ಭಾಗಿ ನಿರೀಕ್ಷೆ


ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರದ ಶಿವಗಂಗಾ ಸ್ಪೋರ್ಟ್ಸ್ ಕ್ಲಬ್‌ನ ಅಂತಾರಾಷ್ಟ್ರೀಯ ಸ್ಕೇಟಿಂಗ್ ರಿಂಕ್‌ನಲ್ಲಿ ನ. 16ರಿಂದ 18ರವರೆಗೆ ನಡೆಯುತ್ತಿರುವ ಸಿಬಿಎಸ್‌ಇ ರಾಷ್ಟ್ರೀಯ ಸ್ಕೇಟಿಂಗ್ ಚಾಂಪಿಯನ್‌ಶಿಪ್-2026ಕ್ಕೆ ಶಾಸಕ ಅಭಯ ಪಾಟೀಲ ಅದ್ಧೂರಿಯಾಗಿ ಚಾಲನೆ ನೀಡಿದರು.


ಬೆಳಗಾವಿಯ ಪ್ರತಿಷ್ಠಿತ ಬಿರ್ಲಾ ಇಂಟರ್‌ನ್ಯಾಷನಲ್ ಸ್ಕೂಲ್ ಮತ್ತು ಗ್ಲೋಬಲ್ ಇಂಟರ್‌ನ್ಯಾಷನಲ್ ಸ್ಕೂಲ್‌ಗಳ ಮಾರ್ಗದರ್ಶನದಲ್ಲಿ, ಬೆಳಗಾವಿ ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಹಾಗೂ ಶಿವಗಂಗಾ ಸ್ಪೋರ್ಟ್ಸ್ ಕ್ಲಬ್ ಸಹಯೋಗದಲ್ಲಿ ಈ ಪ್ರತಿಷ್ಠಿತ ರಾಷ್ಟ್ರೀಯ ಮಟ್ಟದ ಸ್ಪರ್ಧೆಯನ್ನು ಆಯೋಜಿಸಲಾಗಿದೆ.


ದೇಶದ 28 ರಾಜ್ಯಗಳು ಹಾಗೂ 8 ಕೇಂದ್ರಾಡಳಿತ ಪ್ರದೇಶಗಳಲ್ಲದೆ, ವಿದೇಶಗಳ ಸ್ಕೇಟರ್‌ಗಳು ಕೂಡ ಈ ಚಾಂಪಿಯನ್‌ಶಿಪ್‌ನಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಗಲ್ಫ್ ರಾಷ್ಟ್ರಗಳು ಸೇರಿದಂತೆ ಒಟ್ಟು 7 ದೇಶಗಳ ಕ್ರೀಡಾಪಟುಗಳು ಭಾಗವಹಿಸುವ ನಿರೀಕ್ಷೆಯಿದ್ದು, 1,200ಕ್ಕೂ ಅಧಿಕ ಪ್ರತಿಭಾವಂತ ಸ್ಕೇಟರ್‌ಗಳು ತಮ್ಮ ಕ್ರೀಡಾ ಕೌಶಲ ಪ್ರದರ್ಶಿಸಲಿದ್ದಾರೆ.

Related Articles

Back to top button