Kannada NewsLatest
ಶನಿವಾರ ಕನ್ನಡಪರ ಸಂಘಟನೆಯಿಂದ ಬೆಳಗಾವಿ ಚಲೋ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಶಿವಸೇನೆ ಪುಂಡಾಟ ಹಾಗೂ ಮಹಾರಾಷ್ಟ್ರ ಸಿಎಂ ಉದ್ಧವ ಠಾಕ್ರೆ ವಿರುದ್ಧ ಕನ್ನಡಪರ ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿದ್ದು, ಶನಿವಾರ ಬೆಳಗಾವಿ ಚಲೋ ನಡೆಸಲು ನಿರ್ಧರಿಸಿವೆ.
ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ ಠಾಕ್ರೆ ಅವರು ಗಡಿವಿವಾದ ಸಂಬಂಧ ನೀಡಿದ ಹೇಳಿಕೆಯ ವಿರುದ್ಧ ಪ್ರತಿಭಟಿಸಲು ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ , ಸಾ.ರಾ.ಗೋವಿಂದು ನೇತೃತ್ವದ ತಂಡವು ಇದೇ ಶನಿವಾರ ದಿ.23 ರಂದು ಮುಂಜಾನೆ 11 ಗಂಟೆಗೆ ಬೆಳಗಾವಿಯ ಕಿತ್ತೂರು ಚೆನ್ನಮ್ಮ ವೃತ್ತಕ್ಕೆ ಆಗಮಿಸಲಿದೆಯೆಂದು ಸಾ.ರಾ.ಗೋವಿಂದು ತಿಳಿಸಿದ್ದಾರೆ.
ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಈ ಪ್ರತಿಭಟನೆಯಲ್ಲಿ ಕನ್ನಡಪರ ಸಂಘಟನೆ ಕಾರ್ಯಕರ್ತರು ಭಾಗವಹಿಸಬೇಕೆಂದು ಕರೆ ನೀಡಿದ್ದಾರೆ.




