Cancer Hospital 2
Beereshwara 36
LaxmiTai 5

*ಬೆಳಗಾವಿ ನಗರದಲ್ಲಿ ಸಂಚಾರ ಮಾರ್ಗ ಬದಲಾವಣೆ*

Anvekar 3

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಗಣೇಶ ವಿಸರ್ಜನಾ ಮೆರವಣಿಗೆ ಹಿನ್ನೆಲೆಯಲ್ಲಿ ದಿನಾಂಕ: ಸೆ.28ರಂದು ಬೆಳಗಾವಿ ನಗರದಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.

ಸಾರ್ವಜನಿಕ ಶ್ರೀ ಗಣೇಶ ಮೂರ್ತಿಗಳ ಮೆರವಣಿಗೆಯು ನರಗುಂದಕರ ಭಾವೆ ಚೌಕದಿಂದ ಪ್ರಾರಂಭವಾಗಿ ಮಾರುತಿ ಗಲ್ಲಿ, ಹುತಾತ್ಮ ಚೌಕ, ರಾಮದೇವ ಗಲ್ಲಿ, ಸಮಾದೇವಿ ಗಲ್ಲಿ, ಯಂಡೆಖೂಟ, ಕಾಲೇಜ್ ರಸ್ತೆ, ಧರ್ಮವೀರ ಸಂಭಾಜಿ ಚೌಕ (ಬೋಗಾರವೇಸ್), ರಾಮಲಿಂಗಖಿಂಡ ಗಲ್ಲಿ ರಸ್ತೆ, ಟಿಳಕಚೌಕ, ಹೇಮುಕಲಾನಿ ಚೌಕ (ಶಿವಭವನ), ಶನಿ ಮಂದಿರ, ಕಪಿಲೇಶ್ವರ ಫ್ಲೈ ಓವರ ರಸ್ತೆ, ರೇಣುಕಾ ಹೊಟೇಲ್ ಕ್ರಾಸ್ ಮೂಲಕ ಕಪಿಲೇಶ್ವರ ಮಂದಿರ ಬಳಿ ಮುಕ್ತಾಯಗೊಳ್ಳಲಿದೆ.

ಗಣೇಶ ಮೂರ್ತಿಗಳ ಮೆರವಣಿಗೆ ಹಿನ್ನೆಲೆಯಲ್ಲಿ ಸಾರ್ವಜನಿಕ ಸುಗಮ ಸಂಚಾರ ವ್ಯವಸ್ಥೆ ಕುರಿತು ಸೆ.2ರಂದು ಮದ್ಯಾಹ್ನ 2ಗಂಟೆಯಿಂದ ಸೆ.29ರಂದು ಮೆರವಣಿಗೆ ಮುಕ್ತಾಯದವರೆಗೆ ಈ ಕೆಳಗಿನಂತೆ ವಾಹನಗಳ ಸಂಚಾರದಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದೆ. ಪರ್ಯಾಯ ಮಾರ್ಗಗಳನ್ನು ಬಳಸಿಕೊಳ್ಳಲು ಸಾರ್ವಜನಿಕರಲ್ಲಿ ಕೋರಲಾಗಿದೆ.

Emergency Service

ಅಶೋಕ ಪಿಲ್ಲರ ವೃತ್ತ-ಆರ್‌ಟಿಓ-ಚನ್ನಮ್ಮ ಸರ್ಕಲ್ ಮಾರ್ಗವಾಗಿ ಕಾಲೇಜ್ ರಸ್ತೆ ಮುಖಾಂತರ ಖಾನಾಪೂರ ಕಡಗೆ ಸಾಗುವ ವಾಹನಗಳ ಚಾಲಕ/ಸವಾರರು ಸಂಗೊಳ್ಳಿ ರಾಯಣ್ಣ ವೃತ್ತದಿಂದ ಹಳೆ ಪಿಬಿ ರಸ್ತೆ ಮಾರ್ಗವಾಗಿ ಕೃಷ್ಣದೇವರಾಯ (ಕೊಲ್ಹಾಪುರ) ವೃತ್ತ, ವಾಯ್-ಜಂಕ್ಷನ್, ಸದಾಶಿವ ನಗರ ಲಕ್ಷಿö್ಮÃ ಕಾಂಪ್ಲೆಕ್ಸ್, ವಿಶ್ವೇಶ್ವರಯ್ಯ ನಗರ, ಬಾಚಿ ಕ್ರಾಸ್, ಗಾಂಧಿ ಸರ್ಕಲ್ (ಅರಗನ ತಲಾಬ), ಶೌರ್ಯ ಚೌಕ (ಮಿಲ್ಟಿ ಆಸ್ಪತ್ರೆ ಸರ್ಕಲ್), ಕೇಂದ್ರಿಯ ವಿದ್ಯಾಲಯ ನಂ.೨, ಶರ್ಕತ್ ಪಾರ್ಕ, ಗ್ಲೋಬ್ ಥಿಯೇಟರ್ ಸರ್ಕಲ್ ಮೂಲಕ ಖಾನಾಪೂರ ರಸ್ತೆಗೆ ಸೇರಿ ಮುಂದೆ ಸಾಗುವುದು.

ಜೀಜಾಮಾತಾ ಸರ್ಕಲ್ ದಿಂದ ದೇಶಪಾಂಡೆ ಪೆಟ್ರೋಲ್ ಪಂಪ್, ನರಗುಂದಕರ ಭಾವೆ ಚೌಕ/ಕಂಬಳಿ ಖೂಟ, ಪಿಂಪಳ ಕಟ್ಟಾ, ಪಾಟೀಲ ಗಲ್ಲಿ ಕಡೆಗೆ ಸಂಚರಿಸುವ ವಾಹನಗಳನ್ನು ಜೀಜಾಮಾತಾ ಸರ್ಕಲ್‌ದಿಂದ ನೇರವಾಗಿ ಕೇಂದ್ರ ಬಸ್ ನಿಲ್ದಾಣ/ಪ್ಯಾಟ್ಸನ್ ಶೋ ರೂಮ್, ಹಳೆ ಪಿಬಿ ರಸ್ತೆ ಮೂಲಕ ಮುಂದೆ ಸಂಚರಿಸುವುದು.
ಖಾನಾಪೂರ ಕಡೆಯಿಂದ ನಗರ ಭಾಗದಿಂದ ರಾಷ್ಟಿçÃಯ ಹೆದ್ದಾರಿಗೆ ಸೇರುವ ಮತ್ತು ಗೋಗಟೆ ಸರ್ಕಲ್ ಕಡೆಯಿಂದ ರೇಲ್ವೆ ಸ್ಟೇಶನ, ಹೆಡ್ ಪೋಸ್ಟ್ ಆಫೀಸ್ ಸರ್ಕಲ್ ಮೂಲಕ ಶನಿ ಮಂದಿರ ಕಡೆಗೆ ಸಂಚರಿಸುವ ವಾಹನಗಳು ಗ್ಲೋಬ್ ಥಿಯೇಟರ್ ಸರ್ಕಲ್‌ದಲ್ಲಿ ಎಡತಿರುವ ಪಡೆದುಕೊಂಡು ಶರ್ಕತ್ ಪಾರ್ಕ ಕೇಂದ್ರಿಯ ವಿದ್ಯಾಲಯ ನಂ.2, ಶೌರ್ಯ ಚೌಕ (ಮಿಲ್ಟಿç ಆಸ್ಪತ್ರೆ ಸರ್ಕಲ್), ಗಾಂಧಿ ಸರ್ಕಲ್ (ಅರಗನ ತಲಾಬ), ಗಣೇಶ ಮಂದಿರ, ಹಿಂಡಲಗಾ ರಸ್ತೆ, ಡಬಲ್ ರೋಡ್ ಕಡೆಯಿಂದ ಬಾಕ್ಸಾಯಿಟ್ ರಸ್ತೆ ಮೂಲಕ ರಾಷ್ಟಿçÃಯ ಹೆದ್ದಾರಿ ಸೇರಿ ಮುಂದೆ ಸಂಚರಿಸುವುದು.

ನಾಥ-ಪೈ ಸರ್ಕಲ್ ಕಡೆಯಿಂದ ಬ್ಯಾಂಕ ಆಫ್ ಇಂಡಿಯಾ, ಎಸ್‌ಪಿಎಮ್ ರಸ್ತೆ ಮಾರ್ಗವಾಗಿ ಕಪಿಲೇಶ್ವರ ಫ್ಲೆöÊ ಓವರ್ ರಸ್ತೆ ಮುಖಾಂತರ ಸಂಚರಿಸುವ ವಾಹನಗಳು ಬ್ಯಾಂಕ್ ಆಫ್ ಇಂಡಿಯಾ ವೃತ್ತದಿಂದ ಹಳೆ ಪಿಬಿ ರಸ್ತೆ ಸೇರಿ ಮುಂದೆ ಸಂಚರಿಸುವುದು.
ಹಳೆ ಪಿಬಿ ರಸ್ತೆ, ವ್ಹಿ.ಆರ್.ಎಲ್ ಲಾಜಿಸ್ಟಿಕ್, ಭಾತಕಾಂಡೆ ಸ್ಕೂಲ್ ಮಾರ್ಗವಾಗಿ ಕಪಿಲೇಶ್ವರ ಫ್ಲೈ ಓವರ್ ರಸ್ತೆ ಮುಖಾಂತರ ಸಂಚರಿಸುವ ವಾಹನಗಳು ಸಂಭಾಜಿ ರಸ್ತೆ ಬಳಸಿಕೊಂಡು ಬಸವೇಶ್ವರ ವೃತ್ತ ಖಾಸಬಾಗ, ನಾಥ-ಪೈ ಸರ್ಕಲ್ ಮೂಲಕ ಸಂಚರಿಸುವುದು.
ಹಳೆ ಪಿಬಿ ರಸ್ತೆ, ಯಶ್ ಆಸ್ಪತ್ರೆ, ಮಹಾದ್ವಾರ ರಸ್ತೆ, ಕಪಿಲೇಶ್ವರ ಮಂದಿರ ಕಡೆಗೆ ಸಾಗುವ ವಾಹನಗಳು ಯಶ್ ಆಸ್ಪತ್ರೆ ಹತ್ತಿರ ಎಡ ತಿರುವು ಪಡೆದುಕೊಂಡು ವ್ಹಿ.ಆರ್.ಎಲ್ ಲಾಜಿಸ್ಟಿಕ್ ಮೂಲಕ ಹಳೆ ಪಿಬಿ ರಸ್ತೆ ಸೇರಿ ಮುಂದೆ ಸಂಚರಿಸುವುದು.
ಗೂಡ್ಸ್ ಶೆಡ್ ರಸ್ತೆ ಮೂಲಕ ಕಪಿಲೇಶ್ವರ ಫ್ಲೈ ಓವರ್ ರಸ್ತೆ ಕಡೆಗೆ ಸಂಚರಿಸುವ ವಾಹನಗಳು ಎಸ್‌ಪಿಎಮ್ ರಸ್ತೆ ಕಡೆಗೆ ಸಂಚರಿಸದೆ ಮರಾಠಾ ಮಂದಿರ, ಗೋವಾ ವೇಸ್ ಸರ್ಕಲ್ ಕಡೆಗೆ ಸಂಚರಿಸುವುದು.
ಮೆರವಣಿಗೆ ಮಾರ್ಗದಲ್ಲಿ ಎರಡು ಕ್ಯಾರೇಜ್-ವೇ ಇದ್ದ ಕಡೆ ಒಂದು ಮಾರ್ಗವನ್ನು ಹಾಗೂ ಒಂದು ಕ್ಯಾರೇಜ್-ವೇ ಇದ್ದ ರಸ್ತೆಯನ್ನು ಸಂಪೂರ್ಣವಾಗಿ ಮೆರವಣಿಗೆಗೆ ಉಪಯೋಗಿಸಲಾಗುತ್ತಿದೆ.
ಸೆ.28ರಂದು ಮದ್ಯಾಹ್ನ 2 ಗಂಟೆಯಿಂದ ಸೆ.29ರಂದು ಬೆಳಿಗ್ಗೆ 10ಗಂಟೆಯವರೆಗೆ ಎಲ್ಲ ದಿಕ್ಕುಗಳಿಂದ ನಗರ ಪ್ರವೇಶಿಸುವ ಭಾರಿ ವಾಹನಗಳನ್ನು ನಗರದಲ್ಲಿ ಸಂಚರಿಸುವುದನ್ನು ನಿರ್ಬಂಧಿಸಲಾಗಿದೆ.

ಚನ್ನಮ್ಮ ವೃತ್ತದಿಂದ ಮುಖ್ಯ ಮೆರವಣಿಗೆ ಸೇರುವ ಮಾರ್ಗ ಚನ್ನಮ್ಮ ವೃತ್ತದಿಂದ ಶನಿವಾರ ಖೂಟವರೆಗಿನ ಕಾಕತಿವೇಸ್ ರಸ್ತೆ, ಶನಿವಾರ ಖೂಟದಿಂದ ಕಂಬಳಿ ಖೂಟವರೆಗಿನ ಗಣಪತಿ ಗಲ್ಲಿ ರಸ್ತೆ ಹಾಗೂ ಮೆರವಣೆಗೆ ಸಾಗುವ ಮಾರ್ಗವಾದ ನರಗುಂದಕರ ಭಾವೆ ಚೌಕ, ಮಾರುತಿ ಗಲ್ಲಿ, ಹುತಾತ್ಮ ಚೌಕ, ರಾಮದೇವ ಗಲ್ಲಿ, ಸಮಾದೇವಿ ಗಲ್ಲಿ, ಕಾಲೇಜ್ ರಸ್ತೆ, ಧರ್ಮವೀರ ಸಂಭಾಜಿ ಚೌಕ, ರಾಮಲಿಂಗಖಿಂಡ ಗಲ್ಲಿ ರಸ್ತೆ, ಟಿಳಕಚೌಕ, ಹೇಮುಕಾಲನಿ ಚೌಕ, ಶನಿಮಂದಿರ, ಕಪಿಲೇಶ್ವರ ಫ್ಲೈ ಓವರ್ ರಸ್ತೆ, ಕಪಿಲೇಶ್ವರ ಮಂದಿರದ ಎರಡೂ ಬದಿಯ ರಸ್ತೆಗಳಲ್ಲಿ ಮತ್ತು ಕ್ಯಾಂಪ್ ಪ್ರದೇಶ ವ್ಯಾಪ್ತಿಯ ಹ್ಯಾವಲಾಕ್ ರಸ್ತೆ, ಕ್ಯಾಟಲ್ ರೋಡ್, ಯಂಡೇಖೂಟ ದಿಂದ ದೇಶಪಾಂಡೆ ಖೂಟವರೆಗಿನ ಹಾಗೂ ಪವನ ಹೊಟೇಲ್ ವರೆಗಿನ ರಸ್ತೆಗಳಲ್ಲಿ ಸೆ.28 ರಂದು ಮದ್ಯಾಹ್ನ 2 ಗಂಟೆಯಿಂದ ಮೆರವಣಿಗೆ ಮುಕ್ತಾಯದವರೆಗೆ ಎಲ್ಲ ಮಾದರಿಯ ವಾಹನಗಳ ನಿಲುಗಡೆಯನ್ನು ನಿರ್ಬಂಧಿಸಲಾಗಿದೆ.

Bottom Add3
Bottom Ad 2