ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಹಿನ್ನೆಲೆಯಲ್ಲಿ ದೆಹಲಿಯಿಂದ ಕಾಂಗ್ರೆಸ್ ನಾಯಕರು ವಿಶೇಷ ವಿಮಾನದಲ್ಲಿ ಆಗಮಿಸಿದ್ದಾರೆ.
ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ನಾಯಕರು ಸ್ವಾಗತಿಸಿದರು.
ದೆಹಲಿಯಿಂದ ಒಂದೇ ವಿಮಾನದಲ್ಲಿ 120 ಕಾಂಗ್ರೆಸ್ ನಾಯಕರು ಬೆಳಗಾವಿಗೆ ಆಗಮಿಸಿದ್ದು, ಕಾಂಗ್ರೆಸ್ ಅಧಿವೇಶನಕ್ಕೆ ಕ್ಷಣಗಣನೆ ಆರಂಭವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ