Belagavi NewsBelgaum NewsKannada NewsKarnataka NewsLatest
*BREAKING: ಕನ್ನಡ ರಾಜ್ಯೋತ್ಸವ ದಿನದಂದೇ ಎಂಇಎಸ್ ಮುಖಂಡನ ಜೊತೆ ಸೆಲ್ಪಿ ಕ್ಲಿಕ್ಕಿಸಿಕೊಂಡ ಬೆಳಗಾವಿ ಸಿಪಿಐ ಜೆ.ಎಂ.ಕಾಲೆಮಿರ್ಚಿ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಾಜ್ಯೋತ್ಸವದಲ್ಲಿ ಕರಾಳ ದಿನಾಚರಣೆ ಮಾಡಲು ಎಂಇಎಸ್ ಗೆ ಅನುಮತಿ ಕೊಡುವುದಿಲ್ಲ ಎಂದು ರಾತ್ರೋರಾತ್ರಿ ಈ ಮೊದಲು ಅನುಮತಿ ಕೊಡುತ್ತಿದ್ದ ಜಿಲ್ಲಾಡಳಿತದ ವಿರುದ್ಧ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದರು. ಈಗ ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ ಜೆ.ಎಂ.ಕಾಲೆಮಿರ್ಚಿ ಪುಂಡ ಎಂಇಎಸ್ ಮುಖಂಡನ ಜೊತೆಗೆ ಸೆಲ್ಪಿ ತೆಗೆದುಕೊಂಡಿದ್ದು ವಿವಾದಕ್ಕೆ ಕಾರಣವಾಗಿದೆ.
ಕರಾಳ ದಿನಾಚರಣೆಯ ಬಂದೋಬಸ್ತಕ್ಕೆ ಹೋಗಿದ್ದ ಸಿಪಿಐ ಜೆ.ಎಂ.ಕಾಲೆಮಿರ್ಚೆ ಪುಂಡ ಎಂಇಎಸ್ ಮುಖಂಡ ಶುಭಂ ಶೇಳಕೆ ಜೊತೆಗೆ ಸಲುಗೆಯಿಂದ ಮಾತನಾಡಿಸಿದ್ದಲ್ಲದೇ, ಬಳಿಕ ತಮ್ಮ ಮೊಬೈಲ್ ತೆಗೆದುಕೊಂಡು ಶುಭಂ ಶೇಳಕೆ ಜೊತೆ ನಿಂತು ಸೆಲ್ಪಿ ಕ್ಲಿಕ್ಕಿಸಿಕೊಂಡಿದ್ದಾರೆ. ಸಿಪಿಐ ಅವರ ಈ ನಡೆಗೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.



