Belagavi NewsBelgaum NewsKarnataka NewsLatestPolitics
*ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ರಮೇಶ್ ಕತ್ತಿಗೆ ಶಾಕ್: ಜಾರಕಿಹೊಳಿ ಬಣದ 6 ಅಭ್ಯರ್ಥಿಗಳು ಅವಿರೋಧ ಆಯ್ಕೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ರಮೇಶ್ ಕತ್ತಿ ಬಣಕ್ಕೆ ಬಿಗ್ ಶಾಕ್ ಆಗಿದೆ. ಜಾರಕಿಹೊಳಿ ಬಣದ 6 ಜನರು ನಿರ್ದೇಶಕ ಸ್ಥಾನಕ್ಕೆ ಅವರೋಧವಾಗಿ ಆಯ್ಕೆಯಾಗಿದ್ದಾರೆ.
ಬೆಳಗಾವಿ ಡಿಸಿಸಿ ಬ್ಯಾಂಕ್ ನ 16 ನಿರ್ದೇಶಕ ಸ್ಥಾನಗಳ ಪೈಕಿ ಜಾರಕಿಹೊಳಿ ಬಣದ 6 ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ.
ಚಿಕ್ಕೋಡಿಯಿಂದ ಗಣೇಶ್ ಹುಕ್ಕೇರಿ, ಯರಗಟ್ಟಿಯಿಂದ ವಿಶ್ವಾಸ ವೈದ್ಯ, ಮೂಡಲಗಿಯಿಂದ ನೀಲಕಂಠ, ಸವದತ್ತಿಯಿಂದ ವಿರೂಪಾಕ್ಷ ಮಾಮನಿ, ಗೋಕಾಕ್ ನಿಂದ ರಮೇಶ್ ಜಾರಕಿಹೊಳಿ ಪುತ್ರ ಅಮರನಾಥ್, ಬೆಳಗಾವಿಯಿಂದ ಸತೀಶ್ ಜಾರಕಿಹೊಳಿ ಪುತ್ರ ರಾಹುಲ್ ಜಾರಕಿಹೊಳಿ ನಿರ್ದೇಶಕ ಸ್ಥಾನಕ್ಕೆ ಅವಿರೋಧ ಆಯ್ಕೆಯಾಗಿರುವ ಅಭ್ಯರ್ಥಿಗಳು.
ಅಕ್ಟೋಬರ್ 13ರಂದು ಚುನಾವಣಾ ಅಧಿಕಾರಿ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.