Belagavi NewsBelgaum News

*ಪಿ.ಎಂ.ಎಫ್.ಎಂ.ಇ.ನಲ್ಲಿ ಬೆಳಗಾವಿ ಜಿಲ್ಲೆ ಸಾಧನೆ*

ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿ.ಪಂ. ಸಿಇಓ ರಾಹುಲ್ ಶಿಂಧೆ ಪ್ರಶಂಸೆ


ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಜಿಲ್ಲೆಯಲ್ಲಿ ಪಿ.ಎಂ.ಎಫ್.ಎಂ.ಇ. (ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ) ಯೋಜನೆಯಡಿ ೫೧೪ ಫಲಾನುಭವಿಗಳಿಗೆ ಸಹಾಯಧನದೊಂದಿಗೆ ಸಾಲ ಮಂಜೂರಾತಿ ನೀಡಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ. ಈ ಯೋಜನೆಯಡಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಹಾಗೂ ದೇಶದಲ್ಲಿ ಐದನೇ ಸ್ಥಾನ ಪಡೆದಿದೆ ಎಂದು ಜಿಪಂ ಸಿಇಓ ರಾಹುಲ್ ಶಿಂಧೆ ಪ್ರಶಂಸಿಸಿದರು.


ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ (ಜ.೧೮) ರಂದು ನಡೆದ ಕೃಷಿ, ತೋಟಗಾರಿಕೆ, ರೇ? ಹಾಗೂ ಪಶು ಸಂಗೋಪನೆ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


“ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೃಷಿ ಯಂತ್ರಧಾರೆ ಕೇಂದ್ರಗಳು ಹೆಚ್ಚೆಚ್ಚು ರೈತರಿಗೆ ಅನುಕೂಲವಾಗುವಂತೆ ಕಾರ್ಯನಿರ್ವಹಿಸಲು ಕ್ರಮ ವಹಿಸಬೇಕು. ಕೃಷಿ ಇಲಾಖೆಯು ರೈತರಿಗೆ ಹತ್ತಿರವಾದ ಇಲಾಖೆಯಾಗಿದೆ. ಆದ್ದರಿಂದ ರೈತ ಸಮುದಾಯ ಸದ್ಯ ಬರಗಾಲ ಪರಿಸ್ಥಿತಿ ಎದುರಿಸುತ್ತಿರುವುದರಿಂದ ಕೃಷಿಗೆ ಸಂಬಂಧಿಸಿದ ಯಾವುದೇ ಕೊರತೆಗಳು ಉಂಟಾಗದಂತೆ ಯೋಜನೆಗಳನ್ನು ಅನು?ನಗೊಳಿಸಲು ಹಾಗೂ ರೈತರಿಂದ ಯಾವುದೇ ತರಹದ ದೂರುಗಳು ಬರದಂತೆ ಕಟ್ಟುನಿಟ್ಟಾಗಿ ಕ್ರಮವಹಿಸುವಂತೆ, ಕೃಷಿ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.


ಕೃಷಿ ಇಲಾಖೆ ಜಂಟಿ ನಿರ್ದೇಶಕರು, “ಪ್ರಸಕ್ತ ಮುಂಗಾರು ಹಂಗಾಮಿನ ಜೂನ್ ನಲ್ಲಿ ಮಳೆ ಕೊರತೆ ಉಂಟಾಗಿ ಬಿತ್ತನೆ ಕಾರ್ಯಕ್ಕೆ ಹಿನ್ನಡೆಯಾಗಿತ್ತು. ಆದರೆ, ಜುಲೈನಲ್ಲಿ ಬಂದಂತಹ ಮಳೆಯಿಂದ ಶೇ.೯೫ ರ? ಬಿತ್ತನೆ ಸಾಧ್ಯವಾಯಿತು. ಅಗಸ್ಟ್ ಹಾಗೂ ಸೆಪ್ಟಂಬರ್ ನಲ್ಲಿ ಮತ್ತೆ ಮಳೆ ಕೊರತೆ ಉಂಟಾಗಿ ಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾದ ಸುಮಾರು ೩.೫೪ ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಬೆಳೆ ಹಾನಿ ವರದಿಯಾಗಿದೆ. ೪೧೦.೧೧ ಕೋಟಿ ರೂ. ಪರಿಹಾರ ಬೆಳೆ ಹಾನಿ ಪರಿಹಾರ ಕೋರಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ರಾಜ್ಯ ಸರ್ಕಾರದಿಂದ ಬರಗಾಲದಿಂದ ಹಾನಿಗೊಳಗಾದ ರೈತರಿಗೆ ಬೆಳೆ ಸಮೀಕ್ಷೆ ಹಾಗೂ ಪ್ರೂಟ್ಸ್ ತಂತ್ರಾಂಶದ ಮೂಲಕ ೨೦೦೦ ರೂ.ರಂತೆ ಪರಿಹಾರ ವಿತರಣೆ ಕಾರ್ಯ ಪ್ರಗತಿಯಲ್ಲಿದೆ”, ಎಂದು ವಿವರಿಸಿದರು.


ಇದೇ ಸಂದರ್ಭದಲ್ಲಿ ಕೃಷಿ ಭಾಗ್ಯ ಯೋಜನೆಯ ಕರಪತ್ರಗಳನ್ನು ಜಿಪಂ ಸಿಇಒ ರಾಹಲ್ ಶಿಂಧೆ ಬಿಡುಗಡೆಗೊಳಿಸಿದರು. ಮಹಾತ್ಮ ಗಾಂಧಿ ರಾಷ್ಟೀಯ ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲೆಯಲ್ಲಿ ಶೇ.೬೭ ರ? ಮಾನವ ದಿನಗಳನ್ನು ಸೃಜಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಸಭೆಯಲ್ಲಿ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಪಂ ಸಿಇಓ ರಾಹುಲ್ ಶಿಂಧೆ ಅವರು ಶೇ.೧೦೦ ರ? ಪ್ರಗತಿ ಸಾಧಿಸಲು ಹಾಗೂ ಬಾಕಿ ಉಳಿದಿರುವ ಸಾಮಗ್ರಿ ಮತ್ತು ಕೂಲಿ ವೆಚ್ಚ ತುರ್ತಾಗಿ ವೆಚ್ಚ ಭರಿಸಲು ಸೂಚಿಸಿದರು.


ಅದೇ ರೀತಿ ತೋಟಗಾರಿಕೆ ಇಲಾಖೆ ಉಪನಿರ್ದೇಶಕರು, ಬೆಳಗಾವಿ ಜಿಲ್ಲೆಯಲ್ಲಿ ೧೧.೬೯ ಲಕ್ಷ ಹೆಕ್ಟೇರ್ ಸಾಗುವಳಿ ಕ್ಷೇತ್ರವಿದ್ದು, ಈ ಪೈಕಿ ೫೯,೦೯೧ ಹೆಕ್ಟೇರ್ ತೋಟಗಾರಿಕೆ ಕ್ಷೇತ್ರವಿದೆ. ನರೇಗಾದಡಿ ಅನೇಕ ತೋಟಗಾರಿಕೆ ಬೆಳೆಗಳನ್ನು ಬೆಳೆಯಲಾಗುತ್ತಿದೆ. ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂ ತೋಟಗಾರಿಕೆ ಕ್ಷೇತ್ರದಲ್ಲಿ ರೈತರ ಮಕ್ಕಳಿಗೆ ೧೦ ತಿಂಗಳ ಅವಧಿಯ ತೋಟಗಾರಿಕೆ ಬೆಳೆಗಳ ಬೇಸಾಯ ಆಧಾರಿತ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರು.
ಈ ವೇಳೆ ಬೆಳಗಾವಿ ವಿಭಾಗ ಕೃಷಿ ಇಲಾಖೆ ಉಪ ನಿರ್ದೇಶಕರಾದ ಎಸ್.ಬಿ. ಕೊಂಗವಾಡ, ಚಿಕ್ಕೋಡಿ ವಿಭಾಗ ಕೃಷಿ ಇಲಾಖೆ ಉಪ ನಿರ್ದೇಶಕರಾದ ಎಚ್.ಡಿ, ಕೊಳೆಕರ, ತೋಟಗಾರಿಕೆ ಹಾಗೂ ಕೃಷಿ ಇಲಾಖೆಯ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button