Belagavi NewsBelgaum NewsKannada NewsKarnataka NewsLatest

*ಕುಡಿದು ವಾಹನ ಚಾಲನೆ ಮಾಡುವವರ ವಿರುದ್ಧ ಕ್ರಮ: ಬೆಳಗಾವಿಯಲ್ಲಿ 107 ಪ್ರಕರಣ ದಾಖಲು*

ಪ್ರಗತಿವಾಹಿನಿ ಸುದ್ದಿ: ಹೊಸ ವರ್ಷಾಚರಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಪೊಲೀಸರು ಎಲ್ಲೆಡೆ ಕಟ್ಟೆಚ್ಚರ ವಹಿಸಿದ್ದಾರೆ. ಈ ನಡುವೆ ಬೆಳಗಾವಿಯಲ್ಲಿಯೂ ಸಾರ್ವಜನಿಕರಿಗೆ ಪೊಲೀಸರು ಖಡಕ್ ಸೂಚನೆ ನೀಡಿದ್ದಾರೆ.

ಕುಡಿದು ವಾಹನ ಚಾಲನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಬೆಳಗಾವಿ ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಪೊಲೀಸ್ ಪ್ರಧಾನ ಕಛೇರಿ ಹಾಗೂ ರಸ್ತೆ ಸುರಕ್ಷಾ ಸಮಿತಿಯ ನಿರ್ದೇಶನಗಳಂತೆ ಬೆಳಗಾವಿ ನಗರದಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡು ಮೋಟರ್ ವಾಹನ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುತ್ತಿದೆ.

Home add -Advt

ಅದರಂತೆ ದಿನಾಂಕ. 22/12/2025 ರಿಂದ 28/12/2025 ರವರೆಗೆ ನಗರದಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ ತಪ್ಪಿತಸ್ಥ ಚಾಲಕರ ವಿರುದ್ಧ ಒಟ್ಟು 107 ಪ್ರಕರಣಗಳನ್ನು ದಾಖಲಿಸಿ ಕ್ರಮ ಕೈಗೊಳ್ಳಲಾಗಿದ್ದು, ಈ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.


Related Articles

Back to top button