Latest

ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಬೆನ್ನಲ್ಲೇ ಮತ್ತೊಂದು ಬಾಂಬ್ ಸಿಡಿಸಿದ ದಿನೇಶ್ ಕಲ್ಲಹಳ್ಳಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದ ಬೆನ್ನಲ್ಲೇ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಕಲ್ಲಹಳ್ಳಿ, ಈಗಾಗಲೇ ಸಚಿವರ ಸಿಡಿ ಪ್ರಕರಣದ ಬಗ್ಗೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ತನಿಖೆ ನಡೆಯುತ್ತಿದೆ. ಇನ್ನೂ ಹಲವು ರಾಜಕಾರಣಿಗಳು, ನಾಯಕರ ಸಿಡಿಗಳು ಇರುವ ಬಗ್ಗೆ ಮಾಹಿತಿ ಇದೆ. ಸಂದರ್ಭ ಬಂದಾಗ ಅವುಗಳನ್ನೂ ಬಹಿರಂಗಪಡಿಸುತ್ತೇನೆ ಎಂದು ತಿಳಿಸಿದ್ದಾರೆ.

Home add -Advt

ಒಟ್ಟಾರೆ ರಾಜ್ಯ ರಾಜಕಾರಣದಲ್ಲಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣ ಬಿರುಗಾಳಿಯನ್ನೇ ಎಬ್ಬಿಸಿದ್ದು, ಸಚಿವ ಸ್ಥಾನಕ್ಕೆ ಕುತ್ತುಬರುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಿಡಿ ಪ್ರಕರಣ: 100 ಕೋಟಿ ರೂ. ಮಾನನಷ್ಟ ಮೊಕದ್ದಮೆಗೆ ಚಿಂತನೆ – ಬಾಲಚಂದ್ರ ಜಾರಕಿಹೊಳಿ

BIG NEWS: ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಬಿಡುಗಡೆ; ದೂರು

Related Articles

Back to top button