Belagavi NewsBelgaum News
*BREAKING: ಬೆಳಗಾವಿ ಇಎಸ್ಐ ಆಸ್ಪತ್ರೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ದಿಢೀರ್ ಭೇಟಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಇಎಸ್ಐ ಆಸ್ಪತ್ರೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಳಗಾವಿ ನಗರದ ಅಶೋಕ್ ನಗರದಲ್ಲಿರುವ ಇಎಸ್ಐ ಆಸ್ಪತ್ರೆಗೆ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿದ್ದು, ವಿಭಾಗದ ಮುಖ್ಯಸ್ಥರಿಂದ ಎಲ್ಲಾ ಮಾಹಿತಿ ಪಡೆದುಕೊಂಡಿದ್ದಾರೆ. ನೋಂದಣಿ ಕೇಂದ್ರ, ಕಂಪ್ಯೂಟರ್ ಕೊಠಡಿ, ತುರ್ತು ವಿಭಾಗ, ಒಪಿಡಿ, ಎಲುಬು ಕೀಲುಗಳ ವಿಭಾಗಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಶಾಸಕ ಅಭಯ್ ಪಾಟೀಲ್, ಮಾಜಿ ಶಾಸಕ ಬೆನಕೆ ಸಾಥ್ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ