*ಹಿಂಸಾಚಾರಕ್ಕೆ ತಿರುಗಿದ ಕಬ್ಬುಬೆಳೆಗಾರರ ಹೋರಾಟ: ಉದ್ರಿಕ್ತರಿಂದ ಕಲ್ಲು ತೂರಾಟ*

ಪ್ರಗತಿವಾಹಿನಿ ಸುದ್ದಿ: ಒಂದು ಟನ್ ಕಬ್ಬಿಗೆ 3500 ರೂಪಾಯಿ ಬೆಲೆ ನಿಗದಿಗೆ ಒತ್ತಾಯಿಸಿ ಕಬ್ಬು ಬೆಳೆಗಾರರು ಬೆಳಗಾವಿಯಲ್ಲಿ ನಡೆಸುತ್ತಿರುವ ಹೋರಾಟ ಹಿಂಸಾಚಾರಕ್ಕೆ ತಿರುಗಿದೆ. ರೈತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯ ಹತ್ತರಗಿಯಲ್ಲಿ ಕಬ್ಬು ಬೆಳೆಗಾರರು ಪ್ರತಿಭಟನೆ ತೀವ್ರಗೊಳಿಸಿದ್ದು, ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಹೋರಾಟ ನಡೆಸಿದ್ದಾರೆ. ಪ್ರತಿಭಟನೆ ಹೆಚ್ಚುತ್ತಿದ್ದಂತೆ ಹಲವು ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೈತರನ್ನು ವಶಕ್ಕೆ ಪಡೆಯುತ್ತಿದ್ದಂತೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪ್ರತಿಭಟನೆ ಹಿಂಸಾಚಾರಕ್ಕೆ … Continue reading *ಹಿಂಸಾಚಾರಕ್ಕೆ ತಿರುಗಿದ ಕಬ್ಬುಬೆಳೆಗಾರರ ಹೋರಾಟ: ಉದ್ರಿಕ್ತರಿಂದ ಕಲ್ಲು ತೂರಾಟ*