Belagavi NewsBelgaum NewsKarnataka News

*ಬೆಳಗಾವಿಯಲ್ಲಿ ಬೆಂಕಿ ಅವಘಡ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಬೆಳ್ಳಂ ಬೆಳಿಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ.

ಬೆಳಗಾವಿಯ ರವಿವಾರಪೇಟೆ ಈರುಳ್ಳಿ ಮಾರುಕಟ್ಟೆ ಪ್ರದೇಶದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಮೂರು ಅಂಗಡಿಗಳು ಬೆಂಕಿಗಾಹುತಿಯಾಗಿವೆ.

Home add -Advt

ಸ್ಟೇಷನರಿ ಅಂಗಡಿ, ಪ್ಲಾಸ್ಟಿಕ್ ಅಂಗಡಿ, ಬಟ್ಟೆ ಅಂಗಡಿಗಳಿಗೆ ಬೆಂಕಿ ತಗುಲಿದ್ದು, ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಕರಕಲಾಗಿವೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿ ಬೆಂಕಿಯನ್ನು ತಹಬದಿಗೆ ತಂದಿದ್ದಾರೆ.

ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ.


Related Articles

Back to top button