ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಬೆಳ್ಳಂ ಬೆಳಿಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಬೆಳಗಾವಿಯ ರವಿವಾರಪೇಟೆ ಈರುಳ್ಳಿ ಮಾರುಕಟ್ಟೆ ಪ್ರದೇಶದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಮೂರು ಅಂಗಡಿಗಳು ಬೆಂಕಿಗಾಹುತಿಯಾಗಿವೆ. ಸ್ಟೇಷನರಿ ಅಂಗಡಿ, ಪ್ಲಾಸ್ಟಿಕ್ ಅಂಗಡಿ, ಬಟ್ಟೆ ಅಂಗಡಿಗಳಿಗೆ ಬೆಂಕಿ ತಗುಲಿದ್ದು, ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಕರಕಲಾಗಿವೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿ ಬೆಂಕಿಯನ್ನು ತಹಬದಿಗೆ ತಂದಿದ್ದಾರೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. *ಖ್ಯಾತ ಸಾಹಿತಿ ಹೆಚ್.ಎಸ್.ವೆಂಕಟೇಶ್ ಮೂರ್ತಿ ಇನ್ನಿಲ್ಲ*
Copy and paste this URL into your WordPress site to embed
Copy and paste this code into your site to embed