Belagavi NewsBelgaum NewsKarnataka News

*ಬೆಳಗಾವಿಯಲ್ಲಿ ಮತ್ತೊಂದು ಗ್ಯಾಂಗ್ ರೇಪ್: ಅಪ್ರಾಪ್ತೆ ಮೇಲೆ 6 ಜನ ಕಾಮುಕರ ಅಟ್ಟಹಾಸ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಮತ್ತೊಂದು ಗ್ಯಾಂಗ್ ರೇಪ್ ನಡೆದಿದೆ. 15 ವರ್ಷದ ಅಪ್ರಾಪ್ತೆ ಮೇಲೆ 6 ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

ಕೆಲ ದಿನಗಳ ಹಿಂದೆ ಬೆಳಗಾವಿ ಹೊರವಲಯದ ರೆಸಾರ್ಟ್ ನಲ್ಲಿ ಬಾಲಕಿ ಮೇಲೆ ಗ್ಯಾಂಗ್ ರೇಪ್ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಇದೀಗ ಮತ್ತೋರ್ವ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ.

ಆರು ಜನರ ಗ್ಯಾಂಗ್ ಬಾಲಕಿಯ ಮೇಲೆ ಎರಡು ಬಾರಿ ಸಾಮೂಹಿಕ ಅತ್ಯಾಚಾರ ನಡೆಸಿದೆ. ಕಾಕತಿ ಬಳಿಯ ಗುಡ್ಡದಲ್ಲಿ ಈ ಘಟನೆ ನಡೆದಿದ್ದು, ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ.

ಪ್ರಕರಣ ದಾಖಲಾಗುತ್ತಿದ್ದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನು ನಾಲ್ವರ ಪತ್ತೆಗೆ ಶೋಧ ಕಾರ್ಯ ನಡೆದಿದೆ.

ಆರು ತಿಂಗಳ ಹಿಂದೆ ಪರಿಚಿತನಾದ ಅಪ್ರಾಪ್ತೆಯ ಸ್ನೇಹಿತ ಬಾಲಕಿಯನ್ನು ಪುಸಲಾಯಿಸಿ ಕಾಕತಿ ಬಳಿ ಗುಡ್ದಕ್ಕೆ ಕರೆದೊಯ್ದಿದ್ದಾನೆ. ಹೀಗೆ ಕೆರೆದೊಯ್ದ ಆರು ಜನರು ಅತ್ಯಚಹಾರವೆಸಗಿ ವಿಡಿಯೋ ಚಿತ್ರೀಕರಿಸಿಕೊಂಡಿದ್ದಾರೆ. ಬಳಿಕ ಅದೇ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿ ಮತ್ತೆ ಗ್ಯಾಂಗ್ ರೇಪ್ ನಡೆಸಿದ್ದಾರೆ. ಇದೀಗ ಮತ್ತೆ ಸಂತ್ರಸ್ತೆಗೆ ಬ್ಲ್ಯಾಕ್ ಮೇಲ್ ಮಾಡಿ ಬೆದರಿಕೆ ಹಾಕಲಾಗಿದ್ದು, ಸಂತ್ರಸ್ತೆ ಎಪಿಎಂಸಿ ಠಾಣೆಯಲ್ಲಿ ದೂರು ನೀಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button