Belagavi NewsBelgaum NewsKannada NewsKarnataka NewsLatest

*ಬೆಳಗಾವಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: 7ನೇ ತರಗತಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್*

ಪ್ರಗತಿವಾಹಿನಿ ಸುದ್ದಿ: 7ನೇ ತರಗತಿ ವಿದ್ಯಾರ್ಥಿನಿಯನ್ನು ಕಬ್ಬಿನ ಗದ್ದೆಗೆ ಎಳೆದೊಯ್ದು ಕಾಮುಕರು ಅಟ್ಟಹಾಸ ಮೆರೆದಿದ್ದು, ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಮುರಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮನೆಯಿಂದ ಹಿಟ್ಟಿನ ಗಿರಣಿಗೆ ತೆರಳುತ್ತಿದ್ದ ಬಾಲಕಿಯನ್ನು ಎಳೆದೊಯ್ದ ಇಬ್ಬರು ಕಾಮುಕರು ಕಬ್ಬಿನಗದ್ದೆಗೆ ಕರೆದೊಯ್ದು ಗ್ಯಾಂಗ್ ರೇಪ್ ನಡೆಸಿದ್ದಾರೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮಣಿಕಂಠ ದಿನ್ನಿಮನಿ ಹಾಗೂ ಈರಣ್ಣ ಸಂಕಮ್ಮನವರ್ ಎಂಬುವವರು ಈ ಕೃತ್ಯವೆಸಗಿದ್ದಾರೆ ಎಂದು ಆರೋಪಿಸಲಾಗಿದ್ದು, ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

ನವೆಂಬರ್ 23ರಂದೇ ಘಟನೆ ನಡೆದಿದೆ. ಆದರೆ ಆರೋಪಿಗಳು ಬಾಲಕಿಯ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿದ್ದರಿಂದ ದೂರು ನೀಡಲು ಹಿಂಜರಿದಿದ್ದರು. ನಿನ್ನೆ ದೂರು ನೀಡಿದ್ದು, ಪೋಕ್ಸೋ ಕೇಸ್ ದಾಖಲಿಸಲಾಗಿದೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button