Belagavi NewsBelgaum NewsKarnataka NewsLatest

*BREAKING: ಪಾಗಲ್ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಬೆಳಗಾವಿಯಲ್ಲಿ ಬಾಲಕಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಪಾಗಲ್ ಪ್ರೇಮಿಯೊಬ್ಬ ತನ್ನನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ ಕಾರಣಕ್ಕೆ ಮನನೊಂದ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಇಲ್ಲಿನ ಖಾನಾಪುರ ತಾಲೂಕಿನ ದೇವಲತ್ತಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. 17 ವರ್ಷದ ಅಶ್ವಿನಿ ಮೃತ ಬಾಲಕಿ. ರತನ್ ಪಾಟೀಲ್ ಎಂಬಾತ ಅಶ್ವಿನಿಗೆ ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತ ಬಾಲಕಿ ದುಡುಕಿನ ನಿರ್ಧಾರ ಕೈಗೊಂಡಿದ್ದಾಳೆ.

Home add -Advt

ಮನೆಯಲ್ಲಿ ಯಾರೂ ಇಲ್ಲದಿದ್ದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button