ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕನ್ನಡ ಬಾವುಟ ಹಿಡಿದಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬೆಳಗಾವಿಯ ಟಿಳಕವಾಡಿ ಪೊಲೀಸರು ಬಂಧಿಸಿದ್ದಾರೆ.
ಮೂರು ದಿನಗಳ ಹಿಂದೆ ಬೆಳಗಾವಿಯ ಗೋಗಟೆ ಕಾಲೇಜಿನಲ್ಲಿ ನಡೆದಿದ್ದ ವಿದ್ಯಾರ್ಹಿಗಳ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಕನ್ನಡ ಬಾವುಟ ಹಿಡಿದು ಡಾನ್ಸ್ ಮಾಡುತ್ತಿದ್ದ ವಿದ್ಯಾರ್ಥಿ ಮೇಲೆ ಆತನ ಸಹಪಾಠಿಗಳೇ ಆದ ಮರಾಠಿ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದರು.
ಘಟನೆ ಬೆನ್ನಲ್ಲೇ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಕನ್ನಡಿಗ ವಿದ್ಯಾರ್ಥಿ ಮೇಲೆ ಮರಾಠಿ ಪುಂಡರ ಹಲ್ಲೆ ಖಂಡಿಸಿ ಕರವೇ ತೀವ್ರ ಪ್ರತಿಭಟನೆ ನಡೆಸಿತ್ತು. ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿತ್ತು. ಆರೋಪಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಬೆಳಗಾವಿಗೆ ಬರುವುದಾಗಿ, ಸಾವಿರಾರು ಕನ್ನಡ ಬಾವುಟ ಹಿಡಿದು ಪ್ರತಿಭಟನೆ ನಡೆಸುವುದಾಗಿ ಕರವೇ ನಾರಾಯಣಗೌಡ ಎಚ್ಚರಿಕೆ ನೀಡಿದ್ದರು.
ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು ಹಲ್ಲೆ ನಡೆಸಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಸುಮೀತ್ ಕಾಳ್ವೆ ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರಲ್ಲಿ ಮೂವರು ಅಪ್ರಾಪ್ತರಾಗಿದ್ದಾರೆ ಎಂದು ತಿಳಿದುಬಂದಿದೆ.
ಯಾವ ಅಧಿಕಾರಿ ತಡೆಯುತ್ತಾನೋ ನೋಡೋಣ….ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಕರವೇ ನಾರಾಯಣಗೌಡ
https://pragati.taskdun.com/belagavistudentkannada-flagcasekaravenarayanagowdaworning/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ