Belagavi NewsBelgaum News

*ಬೆಳಗಾವಿ ಗುಂಪು ಘರ್ಷಣೆ: 2 ಪ್ರತ್ಯೇಕ ಪ್ರಕರಣ ದಾಖಲಿಸಿದ ಪೊಲೀಸರು*

ನಗರದಲ್ಲಿ ಹೈ ಅಲರ್ಟ್

ಪ್ರಗತಿವಾಹಿನಿ ಸುದ್ದಿ: ಮಕ್ಕಳ ನಡುಇವೆ ಕ್ರಿಕೆಟ್ ಆಟದ ವಿಚಾರವಾಗಿ ಆರಂಭವಾದ ಗಲಾಟೆ ಎರಡು ಗುಂಪುಗಳ ಘರ್ಷಣೆಗೆ ಕಾರಣವಾಗಿದ್ದು, ಮನೆಗಳ ಮೇಲೆ ಕಲ್ಲು ತೂರಾಟ ನಡೆದು ಬೆಳಗಾವಿಯ ಅಳ್ವಾನ್ ಗಲ್ಲಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಈ ಹಿನ್ನೆಲೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ.

ಗುಂಪು ಘರ್ಷಣೆ ಹಾಗೂ ಕಲ್ಲು ತೂರಾಟ ಸಂಬಂಧ ಅನ್ಯಕೋಮಿನ ಯುವಕರು ಹಾಗೂ ಹಿಂದೂಗಳ ಮೇಲೆ ಶಹಾಪುರ ಪೊಲೀಸರು ಠಾಣೆಯಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲಿಸಿ ಎಫ್ ಐ ಆರ್ ದಾಖಲಿಸಿದ್ದಾರೆ.

ಅನ್ಯಕೋಮಿನ 14 ಜನರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 143, 147, 148, 323, 324, 307 ಹಾಗೂ ಐಪಿಸಿ ಸೆಕ್ಷನ್ 354, 504, 506, 153A, 149 ಅಡಿ 13 ಜನ ಹಿಂದೂಗಳ ವಿರುದ್ಧವೇ ಇದೇ ಸೆಕ್ಷನ್ ಅಡಿಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ.

Home add -Advt

ಇನ್ನು ಗುಂಪು ಘರ್ಷಣೆ ಪ್ರಕರಣದಲ್ಲಿ 10 ಜನರನ್ನು ಬಂಧಿಸಲಾಗಿದೆ. ಬೆಳಗಾವಿ ನಗರದಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಹೆಚ್ಚಿನ ಪೊಲೀಸರನ್ನು ಭದ್ರತೆ ನಿಯೋಜಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button