ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ಧಾರಾಕಾರ ಮಳೆಗೆ ಜನ ಜೀವನ ಅಸ್ತವ್ಯಸ್ಥಗೊಂಡಿದೆ.
ಬೆಳಗಾವಿಯ ಪ್ರಮುಖ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಹಲವೆಡೆ ಮರಗಳು ಧರಾಶಾಹಿಯಾಗಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ಚೆನ್ನಮ್ಮ ವೃತ್ತದಲ್ಲಿ ಅಳವಡಿಸಲಾಗಿದ್ದ ಬೃಹತ್ ಫ್ಲೆಕ್ಸ್, ಬ್ಯಾನರ್ ಗಳು ಬಿರುಗಾಳಿ ಮಳೆಗೆ ಕಿತ್ತು ಹೋಗಿದ್ದು, ನಗರದ ಹಲವೆಡೆ ಅವಾಂತರ ಸೃಷ್ಟಿಯಾಗಿದೆ.
ಅನೇಕ ಕಡೆ ಮರದ ರೆಂಬೆ, ಕೊಂಬೆಗಳು ನೆಲಕ್ಕುರುಳಿವೆ. ಇದರಿಂದಾಗಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿದೆ. ನಗರದ ಬಹುತೇಕ ಭಾಗಗಳಲ್ಲಿ ಮಳೆಯಾಗಿದ್ದು, ಜಿಲ್ಲೆಯ ಅಲ್ಲಲ್ಲಿ ಸಹ ಅಬ್ಬರಿಸಿದೆ.
ಇನ್ನು ಕರಾವಳಿ ಜಿಲ್ಲೆಗಳಲ್ಲಿಯೂ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಏ.11ರವರೆಗೂ ಮಳೆಯಾಗಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ