ಬೆಳಗಾವಿ: ಇನ್ನಷ್ಟು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಇನ್ನೂ ಕೆಲವು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಉಪ ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಬೆಳಗಾವಿ ಇವರು ಪತ್ರ ಸಲ್ಲಿಸಿ, ಧಾರಕಾರವಾಗಿ ಮಳೆಯು ಸುರಿಯುತ್ತಿರುವುರಿಂದ ಶಾಲೆಗಳಲ್ಲಿ ಮಳೆ ನೀರು ಹರಿದು ಮತ್ತು ಹಲವಾರು ಶಾಲಾ ಕಟ್ಟಡಗಳು ಸೋರುತ್ತಿರುವುದರಿಂದ ವಿದ್ಯಾರ್ಥಿಗಳು ಶಾಲೆಗೆ ಹೋಗಲು ಸಾಧ್ಯವಾಗದೇ ಇರುವುದರಿಂದ ದಿನಾಂಕ: 26.07.2024 ರಂದು ಗೋಕಾಕ, ಮೂಡಲಗಿ, ರಾಯಬಾಗ ಹಾಗೂ ಹುಕ್ಕೇರಿ ತಾಲೂಕುಗಳಲ್ಲಿಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಯನ್ನು ನೀಡುವಂತೆ ವಿನಂತಿಸಿರುತ್ತಾರೆ
ಜಿಲ್ಲೆಯ ಗೋಕಾಕ, ಮೂಡಲಗಿ, ರಾಯಬಾಗ ಹಾಗೂ ಹುಕ್ಕೇರಿ ತಾಲೂಕುಗಳಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಘಟಪ್ರಭಾ, ಹಿರಣ್ಯಕೇಶಿ ನದಿಗಳು, ವಿವಿಧ ಹಳ್ಳಗಳು ತುಂಬಿ ಹರಿಯುತ್ತಿರುವುದರಿಂದ ಶಾಲಾ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34(ಎಮ್) ರಡಿ ಜಿಲ್ಲಾಧಿಕಾರಿ ಹಾಗೂ ಅಧ್ಯಕ್ಷರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ರವರಿಗೆ ಪ್ರದತ್ತವಾದ ಅಧಿಕಾರದ ಮೇರೆಗೆ ಬೆಳಗಾವಿ ಜಿಲ್ಲೆಯ ಗೋಕಾಕ, ಮೂಡಲಗಿ, ರಾಯಬಾಗ ಹಾಗೂ ಹುಕ್ಕೇರಿ ತಾಲೂಕುಗಳಾದ್ಯಂತ ಅಂಗನವಾಡಿ, ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ದಿನಾಂಕ: 26.07.2024 ರಂದು ರಜೆ ಘೋಷಿಸುವ ಕುರಿತು ಈ ಕೆಳಗಿನಂತೆ ಆದೇಶ ಮಾಡಿದೆ.
ಆದೇಶ
ಈ ಮೇಲಿನ ಪ್ರಸ್ತಾವನೆಯಲ್ಲಿ ವಿವರಿಸಿದ ಕಾರಣಗಳಿಂದ ಮತ್ತು ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34 (ಎಮ್) ರಡಿ ಪ್ರದತ್ತವಾದ ಅಧಿಕಾರದ ಮೇರೆಗೆ ಬೆಳಗಾವಿ ಜಿಲ್ಲೆಯ ಗೋಕಾಕ, ಮೂಡಲಗಿ, ರಾಯಬಾಗ ಹಾಗೂ ಹುಕ್ಕೇರಿ ತಾಲೂಕುಗಳಾದ್ಯಂತ ಅಂಗನವಾಡಿ, ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ದಿನಾಂಕ: 26.07.2024 ರಂದು ರಜೆ ಘೋಷಿಸಿ ಆದೇಶಿಸಿದೆ.
ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳಗಾವಿ/ಚಿಕ್ಕೋಡಿ ಹಾಗೂ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಬೆಳಗಾವಿ ರವರು ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಹಾಗೂ ಈ ರಜಾ ಅವಧಿಯನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ