Belagavi NewsBelgaum NewsKannada NewsKarnataka NewsLatest
*ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ನುಗ್ಗಿದ ಟ್ರ್ಯಾಕ್ಟರ್*

ಪ್ರಗತಿವಾಹಿನಿ ಸುದ್ದಿ: ಏಕಾಏಕಿ ಚಾಲಕನ ನಿಯಂತ್ರಣ ಕಳೆದುಕೊಂಡ ಟ್ರ್ಯಾಕ್ಟರ್ ಹೋಟೆಲ್ ಗೆ ನುಗ್ಗಿದ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಕಬ್ಬು ತುಂಬಿಕೊಂಡು ಬರಿತ್ತಿದ್ದ ಟ್ರ್ಯಾಕ್ಟರ್ ಇದ್ದಕ್ಕಿದ್ದಂತೆ ಚಾಲಕನ ನಿಯಂತ್ರಣ ಕಳೆದುಕೊಂಡು ವೇವಾಗಿ ಹೋಟೆಲ್ ಗೆ ನುಗ್ಗಿದೆ. ಹೋಟೆಲ್ ನಲ್ಲಿದ್ದವರು ದಿಕ್ಕಾಪಾಲಾಗಿ ಓಡಿ ಜೀವ ಉಳಿಸಿಕೊಂಡಿದ್ದಾರೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಟ್ರ್ಯಾಕ್ಟರ್ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.




