Belagavi NewsBelgaum NewsKarnataka News

*ಬೆಳಗಾವಿಯಲ್ಲಿ ಮಳೆ ಅಬ್ಬರಕ್ಕೆ ಮತ್ತೊಂದು ದುರಂತ: ಗೋಡೆ ಕುಸಿದು ಬಿದ್ದು 3 ವರ್ಷದ ಮಗು ಸಾವು*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ವರುಣಾರ್ಭಟಕ್ಕೆ ಸಾಲು ಸಾಲು ಅನಾಹುತಗಳು ಸಂಭವಿಸುತ್ತಿವೆ. ಅದರಲ್ಲಿಯೂ ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮಳೆಯಿಂದಾಗಿ ಗೋಡೆ ಕುಸಿದು ಬಿದ್ದು 3 ವರ್ಷದ ಮಗು ಸಾವನ್ನಪ್ಪಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ಮಳೆ ಅಬ್ಬರಕ್ಕೆ ಮನೆಗೋಡೆ ಕುಸಿದು ಬಿದ್ದ ಪರಿಣಾಮ ಮನೆಯಲಿ ಮಲಗಿದ್ದ ಮಗು ಸಾವನ್ನಪ್ಪಿದೆ. ಇನ್ನೋರ್ವ ಬಾಲಕಿಗೆ ಗಾಯಗಳಾಗಿವೆ. ಮನೆಯಲ್ಲಿ ಮಲಗಿದ್ದ ಮಕ್ಕಳ ಮೇಲೆಯೇ ಮನೆಯ ಹಿಂಭಾಗದ ಗೋಡೆ ಕುಸಿದು ಬಿದ್ದಿದೆ.

3 ಕೀರ್ತಿಕಾ ಮೃತ ಮಗು. ಮಗುವಿನ ಸಹೋದರಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಗೋಕಾಕ್ ಶಹರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button