Belagavi NewsBelgaum NewsKannada NewsKarnataka News

*ಇಂಡಿಯನ್ ಬ್ಯಾಂಕ್ ನಲ್ಲಿದ್ದ ಚಿನ್ನಾಭರಣ ಲೂಟಿ ಕೇಸ್: ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಇಂಡಿಯನ್ ಬ್ಯಾಂಕ್ ಶಾಖೆಯಲ್ಲಿದ್ದ ಚಿನ್ನಾಭರಣ ಕಳುವು ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ಟಿಳಕವಾಡಿ ಠಾಣೆ ಪೊಲೀಸರು ಕಳ್ಳನನ್ನು ಬಂಧಿಸಿದ್ದಾರೆ.

ಬೆಳಗಾವಿ ನಗರದ ಟಿಳಕವಾಡಿಯ ಭಾಗ್ಯನಗರದ 2ನೇ ಕ್ರಾಸ್ ನಲ್ಲಿರುವ ಇಂಡಿಯನ್ ಬ್ಯಾಂಕ್ ನ ಲಾಕರ್ ನಲ್ಲಿದ್ದ ಚಿನ್ನಾಭರಣಗಳನ್ನು ಕದ್ದು ಕಳ್ಳರು ಪರಾರಿಯಾಗಿದ್ದರು. ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನನ್ನು 32 ವರ್ಷದ ಚಂದ್ರಕಾಂತ್ ಬಾಲಾಜಿ ಎಂದು ಗುರುತಿಸಲಾಗಿದೆ.

ಬಂಧಿತನಿಂದ 143.9 ಗ್ರಾಂ ಚಿನ್ನಾಭರಣ ಸೇರಿ ಒಟ್ಟು 14,00,000 ರೂ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ಬೆಳಗಾವಿ ನಗರ ಪೊಲೀಸ್ ಆಯುಕ್ತ ಬೋರಸೆ ಭೂಷಣ್ ಗುಲಾಬರಾವ್, ಉಪಪೊಲೀಸ್ ಆಯುಕ್ತರಾದ ರೋಹನ್ ಜಗದೀಶ್, ನಿರಂಜನ್ ರಾಜೇ ಅರಸ್, ಎಸಿಪಿ ಶೇಖರಪ್ಪ ಮಾರ್ಗದರ್ಶನದಲ್ಲಿ ಟಿಳಕವಾಡಿ ಠಾಣೆ ಇನ್ಸ್ ಪೆಕ್ಟರ್ ಪರಶುರಾಮ್ ಪೂಜೇರಿ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

Home add -Advt

Related Articles

Back to top button