Belagavi NewsBelgaum NewsKannada NewsKarnataka NewsLatest

*ಕಿತ್ತೂರು ಚೆನ್ನಮ್ಮ ಮೃಗಾಲಯದ ಸುತ್ತಮುತ್ತಲ ಗ್ರಾಮಗಳಿಗೆ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಭೂತರಾಯನಹಟ್ಟಿ ಬಳಿಯ ಕಿತ್ತೂರು ಚೆನ್ನಮ್ಮ ಕಿರು ಮೃಗಾಲಯದಲ್ಲಿ 31 ಕೃಷ್ಣಮೃಗಗಳ ಸಾವು ಪ್ರಕರಣ ಸುತ್ತಮುತ್ತಲ ಗ್ರಾಮಗಳಿಗೂ ಸಾಂಕ್ರಾಮಿಕ ರೋಗ ಭೀತಿ ಸೃಷ್ಟಿಸಿದೆ.

ಕಿತ್ತೂರು ಚೆನ್ನಮ್ಮ ಮೃಗಾಲಯದಲ್ಲಿ ಗಳಲೆ ರೋಗದಿಂದಾಗಿ 31 ಕೃಷ್ಣಮೃಗಗಳು ಸಾವನ್ನಪ್ಪಿದ್ದು, ಮೃಗಾಲಯದ ಸುತ್ತಮುತ್ತಲ ಗ್ರಾಮಗಳಿಗೂ ಗಳಲೆ ರೋಗ ಹರಡುವ ಸಾಧ್ಯತೆ ಇದೆ ಎಂದು ಅರಣ್ಯ ಇಲಾಖೆ ಪಶುಪಾಲನಾ ಇಲಾಖೆ ಉಪನಿರ್ದೇಶಕರಿಗೆ ಪತ್ರ ಬರೆದಿದೆ.

ಸಸ್ಯಹಾರದ ಪ್ರಾಣಿಗಳಿಗೂ ಗಳಲೆ ರೋಗ ಹರಡುವ ಸಾಧ್ಯತೆ ಇರುವುದರಿಂದ ಸಾಕುಪ್ರಾಣಿಗಳನ್ನು ಸಾಕಿದವರು ಎಚ್ಚರಿಕ್ಜೆ ವಹಿಸಲು ಸೂಚಿಸಲಾಗಿದೆ. ಗಳಲೆ ರೋಗ ಹರಡದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಕ್ಕೆ ಸೂಚಿಸಲಾಗಿದೆ.

ಇನ್ನು ಮೃಗಾಲಯದಲ್ಲಿ ಇನ್ನುಳಿದ 7 ಕೃಷ್ಣಮೃಗಗಳಿಗೆ ಹಾಗೂ ಇತರ ಪ್ರಾಣಿಗಳಿಗೆ ಯಾವುದೇ ಸೋಂಕು ಹರಡದಂತೆ ಚಿಕಿತ್ಸೆ ನೀಡಲಾಗಿದ್ದು, ಮುನ್ನೆಚ್ಚರಿಕೆ ವಹಿಸಲಾಗಿದೆ. ಮೃಗಾಲಯಕ್ಕೆ ಹಾಗೂ ಮೃಗಾಯಲದ ಸುತ್ತಮುತ್ತ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.

Home add -Advt


Related Articles

Back to top button