*BREAKING: ಬೆಳಗಾವಿ: ಕಿತ್ತೂರು ಚೆನ್ನಮ್ಮ ಮೃಗಾಲಯದಲ್ಲಿ ಮತ್ತೊಂದು ಕೃಷ್ಣಮೃಗ ಸಾವು*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಕಿತ್ತೂರು ಚೆನ್ನಮ್ಮ ಕಿರು ಮೃಗಾಲಯದಲ್ಲಿ ಇಂದು ಮತ್ತೊಂದು ಕೃಷ್ಣಮೃಗ ಸಾವನ್ನಪ್ಪಿದೆ. ಮೃಗಾಲಯದಲ್ಲಿ ಕೃಷ್ಣಮೃಗಗಳ ನಿಗೂಢ ಸಾವಿನ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಭೂತರಾಯನಹಟ್ಟಿ ಬಳಿಯ ಕಿತ್ತೂರು ಚೆನ್ನಮ್ಮ ಕಿರು ಮೃಗಾಲಯದಲ್ಲಿ ನವೆಂಬರ್ 13 ರಂದು 8 ಕೃಷ್ಣಮೃಗಗಳು ಸಾವನ್ನಪ್ಪಿದ್ದವು. ನಿನ್ನೆ ಒಂದೇ ದಿನ 20 ಕೃಷ್ಣಮೃಗಗಳು ಸಾವನ್ನಪ್ಪಿದ್ದವು. ಇಂದು ಮತ್ತೊಂದು ಕೃಷ್ಣಮೃಗ ಸಾವನ್ನಪ್ಪಿದ್ದು ಆತಂಕ ಮೂಡಿಸಿದೆ. ಮೃಗಾಲಯದಲ್ಲಿರುವ ಉಳಿದ 9 ಕೃಷ್ಣಮೃಗಗಳಿಗೆ ಚಿಕಿತ್ಸೆ ನೀಡಿ ಜಾಗರೂಕತೆಯಿಂದ ನೋಡಿಕೊಳ್ಳಲಾಗುತ್ತಿದೆ. ಮತ್ತೊಂದೆಡೆ ಬೆಂಗಳೂರಿನ ಬನ್ನೇರುಘಟ್ಟ ಪಶು … Continue reading *BREAKING: ಬೆಳಗಾವಿ: ಕಿತ್ತೂರು ಚೆನ್ನಮ್ಮ ಮೃಗಾಲಯದಲ್ಲಿ ಮತ್ತೊಂದು ಕೃಷ್ಣಮೃಗ ಸಾವು*