Belagavi NewsBelgaum NewsKarnataka NewsLatest
*BREAKING: ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಮೆರವಣಿಗೆ ವೇಳೆ ದುಷ್ಕರ್ಮಿಗಳ ಅಟ್ಟಹಾಸ: ಐವರಿಗೆ ಯದ್ವಾತದ್ವಾ ಚಾಕು ಇರಿತ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮದ ವೇಳೆಯೇ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ರಾಜ್ಯೋತ್ಸವದ ಹಿನ್ನೆಲೆಯಲ್ಲಿ ರೂಪಕಗಳ ಮೆರವಣಿಗೆ ವೇಳೆ ದುಷ್ಕರ್ಮಿಗಳು ಐವರಿಗೆ ಚಾಕು ಇರಿದು ಪರಾರಿಯಾಗಿದ್ದಾರೆ.
ಬೆಳಗಾವಿಯ ಸದಾಶಿವನಗರದ ಲಕ್ಷ್ಮೀ ಕಾಂಪ್ಲೆಕ್ಸ್ ಬಳಿ ಮೆರವಣಿಗೆ ವೇಳೆ ಜನರ ನಡುವೆಯೇ ನುಗ್ಗಿ ಬಂದ ದುಷ್ಕರ್ಮಿಗಳು ಐವರಿಗೆ ಮನಬಂದಂತೆ ಚಾಕು ಇರಿದಿದ್ದು, ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ.
ಐವರು ಚಾಕು ಇರಿತದಿಂದ ಗಾಯಗೊಂಡಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. 3 ಗಾಯಾಳುಗಳನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.
ಗಾಯಾಳುಗಳನ್ನು ಗುರುನಾಥ ವಕ್ಕುಂದ, ಸಚಿನ್ ಕಾಂಬಳೆ, ಲೋಕೇಶ್ ಬೆಟಗೇರಿ, ಮಹೇಶ್, ವಿನಾಯಕ ಹಾಗೂ ನಜೀರ್ ಪಠಾಣ್ ಎಂದು ಗುರುತಿಸಲಾಗಿದೆ. ಚಾಕು ಇರಿತದಿಂದ ಗಾಯಗೊಂಡವರು ನೆಹರುನಗರದ ನಿವಾಸಿಗಳು ಎಂದು ತಿಳಿದುಬಂದಿದೆ.




