Belagavi NewsBelgaum NewsKarnataka News

*ಬೆಳಗಾವಿಯಲ್ಲಿ ಘೋರ ದುರಂತ: ಬಾಗಿನ ಅರ್ಪಿಸಲು ಹೋಗಿ ನದಿಯಲ್ಲಿ ಕೊಚ್ಚಿ ಹೋದ ಮಹಿಳೆ*

ಪ್ರಗತಿವಾಹಿನಿ ಸುದ್ದಿ: ತುಂಬಿ ಹರಿಯುತ್ತಿದ್ದ ಕೃಷ್ಣಾನದಿಗೆ ಬಾಗಿನ ಅರ್ಪಿಸಲು ಹೋಗಿದ್ದ ಮಹಿಳೆಯೊಬ್ಬರು ಕಾಅಲು ಜಾಅರಿಬಿದ್ದು, ನೀರಿನಲ್ಲಿ ಕೊಚ್ಚಿ ಹೋಗಿರುವ ಘಟಟನೆ ನಡೆದಿದೆ.

ಬೆಳಗಾವಿಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಬಳಿ ಈ ದುರಂತ ಸಂಭವಿಸಿದೆ. ಮಾಂಜರಿ ಗ್ರಾಮದ ಸಂಗೀತಾ (40) ನೀರಿನಲ್ಲಿ ಮುಳುಗಿ ನಾಪತ್ತೆಯಾದವರು.

ಘಟನಾ ಸ್ಥಳಕ್ಕೆ ಚಿಕ್ಕೋಡಿ ತಹಶೀಲ್ದಾರ್, ಉಪತಹಶೀಲ್ದಾರ್, ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಭೇಟಿ ನೀಡಿದ್ದಾರೆ. ನದಿಯಲ್ಲಿ ನಾಪತ್ತೆಯಾಗಿರುವ ಮಹಿಳೆಗಾಗಿ ಶೋಧಕಾರ್ಯ ನಡೆದಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button