Belagavi NewsBelgaum NewsKannada NewsKarnataka NewsLatest

*BREAKING: ಬೆಳಗಾವಿಯಲ್ಲಿ ಮತ್ತೊಂದು ಘಟನೆ: ವಿದ್ಯಾರ್ಥಿನಿ ಮೇಲೆ ಉಪನ್ಯಾಸಕನಿಂದ ಅತ್ಯಾಚಾರ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಮತ್ತೊಂದು ಹೇಯ ಘಟನೆ ನಡೆದಿದೆ. ಉಪನ್ಯಾಸಕನೊಬ್ಬ ವಿದ್ಯಾರ್ಥಿನಿಯ ಮೇಲೆ ನಿರಂತರ ಅತ್ಯಾಚಾರವೆಸಗಿ, ಬೆದರಿಕೆ ಹಾಕಿತುವ ಘಟನೆ ನಡೆದಿದೆ.

ಬೆಳಗಾವಿಯ ಖಾಸಗಿ ಕಾಲೇಜು ಉಪನ್ಯಾಸಕ ನಾಗೇಶ್ವರ್ ವಿರುದ್ಧ ಸಂತ್ರಸ್ತ ವಿದ್ಯಾರ್ಥಿನಿಯ ಪೋಷಕರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿನಿಗೆ ಅತ್ಯಾಚಾರವೆಸಗಲೆಂದೇ ಆರೋಪಿ ಉಪನ್ಯಾಸಕ ನಗರದಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದ. ಹಲವು ವಿದ್ಯಾರ್ಥಿಗಳನ್ನು ಹೆದರಿಸಿ, ಬ್ಲ್ಯಾಕ್ ಮೇಲ್ ಮಾಡಿ ಅತ್ಯಾಚಾರವೆಸಗಿರುವ ಆರೋಪ ಕೇಳಿಬಂದಿದೆ.

Home add -Advt

ಓರ್ವ ವಿದ್ಯಾರ್ಥಿನಿಗೆ ಕಳೆದ ಎರಡು ವರ್ಷಗಳಿಂದ ನಿರಂತರ ಅತ್ಯಾಚಾರವೆಸಗಿರುವ ಉಪನ್ಯಾಸಕ ನಾಗೇಶ್ವರ್, ಬೆದರಿಕೆ ಹಾಕಿ ಕ್ರೌರ್ಯ ಮೆರೆದಿದ್ದಾನಂತೆ. ತನ್ನ ಜೊತೆ ಲಿವ್ ಇನ್ ರಿಲೇಷನ್ ಶಿಪ್ ನಲ್ಲಿ ಇರಬೇಕು. ಕರೆದಾಗ ಬರಬೇಕು. ಇಬ್ಬರ ಮಧ್ಯೆ ಇರುವ ಸಂಬಂಧದ ಬಗ್ಗೆ ಯಾರಿಗೂ ಬಾಯ್ಬಿಡಬಾರದು. ವಿಷಯ ಬಹಿರಂಗಪಡಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಉಪನ್ಯಾಸಕನ ದೌರ್ಜನ್ಯದಿಂದ ಕಂಗಾಲಾದ ವಿದ್ಯಾರ್ಥಿನಿ ತನ್ನ ಪೋಷಕರಿಗೆ ಹೇಳಿಕೊಂಡಿದ್ದಾಳೆ.

ವಿದ್ಯಾರ್ಥಿನಿಯ ಪೋಷಕರು ಕ್ಯಾಂಪ್ ಠಾಣೆಯಲ್ಲಿ ದೂರು ನೀಡಿದ್ದು, ಉಪನ್ಯಾಸಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.


Related Articles

Back to top button