
ಕಾಕತಿಯಲ್ಲಿ ನಡೆಯುವ ೧೦ನೇ ಬೆಳಗಾವಿ ತಾಲೂಕಾ ಕನ್ನಡ ಸಾಹಿತ್ಯ ಸಮ್ಮೇಳನ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನ ಜನೆವರಿ 27ರಂದು ಕಾಕತಿಯ ಸಿದ್ಧೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.
ಹಿರಿಯ ಮಹಿಳಾ ಸಾಹಿತಿ ಶೈಲಜಾ ಬಿಂಗೆ ಅವರು ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ರಂಗಸೃಷ್ಟಿ ತಂಡದ ಕಾರ್ಯಕಾರಿ ಸಮಿತಿ ಸದಸ್ಯರಾಗಿರುವ ಶೈಲಜಾ ಭಿಂಗೆಯವರನ್ನು ರಂಗಸೃಷ್ಟಿಯ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.
ಶೈಲಜಾ ಭಿಂಗೆ ಅವರು ಕಳೆದ 40 ವರ್ಷಗಳಿಗಿಂತ ಹೆಚ್ಚು ಸಮಯದಿಂದ ಕನ್ನಡ ಸಾಹಿತ್ಯ ಪರಿಷತ್ ಸದಸ್ಯರಾಗಿ, ಸಾಹಿತ್ಯ ಸಮ್ಮೇಳನಗಳ ಸಂಘಟನೆಯಲ್ಲಿ ಸಕ್ರೀಯವಾಗಿ ತಮ್ಮನ್ನು ತೊಡಗಿಸಿಕೊಳ್ಳುತ್ತ ಬಂದಿದ್ದಾರೆ. ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಅವರನ್ನು ಆಯ್ಕೆ ಮಾಡಿರುವುದು ಸ್ತುತ್ಯಾರ್ಹವಾಗಿದೆ ಎಂದು ಹಿರಿಯ ಸಾಹಿತಿ ರಾಮಕೃಷ್ಣ ಮರಾಠೆ ಪ್ರತಿಕ್ರಿಯಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ