*ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಗೆ ನಿರ್ಧರಿಸಿದ ಸ್ವಾಮೀಜಿ*
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ವಾಮೀಜಿಯೊಬ್ಬರು ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.
ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಶ್ರೀ ವೀರೇಶ್ವರ ಸ್ವಾಮೀಜಿ, ತಾವು ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.
ಬೆಳಗಾವಿ ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳಲ್ಲಿ ನನ್ನದೇ ಅದ ಭಕ್ತ ವರ್ಗವಿದೆ. ಹಾಗಾಗಿ ಈ ಬಾರಿ ಬೆಳಗಾವಿ ಲೋಕಸಭಾ ಅಖಾಡದಿಂದ ನಾನು ಸ್ಪರ್ಧೆ ಮಾಡುತ್ತೇನೆ ಎಂದು ಕಿತ್ತೂರು ತಾಲೂಕಿನ ದೇಗುಲಹಳ್ಳಿ ಮತ್ತು ಅಂಬಡಗಟ್ಟಿ ಗ್ರಾಮದ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಶ್ರೀ ವಿರೇಶ್ವರ ಸ್ವಾಮೀಜಿ ತಿಳಿಸಿದ್ದಾರೆ.
ನಾನು ಯಾರ ವಿರುದ್ಧವೂ ಸ್ಪರ್ಧಿಸಲ್ಲ. ಬೆಳಗಾವಿ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ. ಮಠದ ಭಕ್ತರ ಇಚ್ಛೆಯಂತೆ ಚರ್ಚಿಸಿ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದ್ದೇನೆ. ಏಪ್ರಿಲ್ 12ರಂದು ನಾಮಪತ್ರ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ