Belagavi NewsBelgaum NewsKannada NewsKarnataka NewsLatest
*ಬೆಳಗಾವಿ ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಕಾರ್ತಿಕ್ ಎಂ ನೇಮಕ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಮಹಾನಗರ ಪಾಲಿಕೆ ನೂತನ ಆಯುಕ್ತರನ್ನಾಗಿ ಕಾರ್ತಿಕ್ ಎಂ. ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕೆ ಎ ಎಸ್ ಹಿರಿಯ ಶ್ರೇಣಿಯ ಅಧಿಕಾರಿ ಕಾರ್ತಿಕ್ ಎಂ ಅವರನ್ನು ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ. ಕಾರ್ತಿಕ್ ಅವರು ಬೆಂಗಳೂರಿನ ಸಂಜಯ್ ಗಾಂಧಿ ಟ್ರಾಮಾ ಮತ್ತು ಅಸ್ಥಿ ಚಿಕಿತ್ಸೆ ಸಂಸ್ಥೆ ಮುಖ್ಯ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಅವರನ್ನು ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.
ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಾಗಿದ್ದ ಶೋಭಾ ಅವರನ್ನು ಮಾತೃ ಇಲಾಖೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

