Belagavi NewsBelgaum NewsKarnataka NewsNational

*ಭೀಕರ ಪ್ರವಾಹಕ್ಕೆ ಸಾರಿಗೆ ಸಂಪರ್ಕ ಕಡಿತ: ಬೆಳಗಾವಿ-ಮೀರಜ್ ನಡುವೆ ವಿಶೇಷ ರೈಲು ವ್ಯವಸ್ಥೆ*

ಪ್ರಗತಿವಾಹಿನಿ ಸುದ್ದಿ: ಭಾರಿ ಮಳೆಯಿಂದಾಗಿ ಬೆಳಗಾವಿಯಲ್ಲಿ ಪ್ರವಾಹವುಂತಾಗಿದ್ದು, ಕೃಷ್ಣಾ, ಘಟಪ್ರಭಾ ನದಿ ವ್ಯಾಪ್ತಿಯಲ್ಲಿ 44 ಸೇತುವೆಗಳು ಮುಳುಗಡೆಯಾಗಿವೆ. ಇದರಿಂದಾಗಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಬೆಳಗಾವಿ ಹಾಗೂ ಮಹಾರಾಷ್ಟ್ರದ ಮೀರಜ್ ಗೆ ಸಾರಿಗೆ ಸಂಪರ್ಕ ಕಡಿತಗೊಂಡಿದೆ.

ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ದೈಕ್ಷಿಣ ನೈಋತ್ಯ ರೈಲ್ವೆ ಬೆಳಗಾವಿ ಹಾಗೂ ಮೀರಜ್ ನಡುವೆ ವಿಶೇಷ ರೈಲು ಸಂಚಾರ ಕಲ್ಪಿಸಿದೆ.

ಆಗಸ್ಟ್ 1ರಿಂದ 4ರವರೆಗೆ ಬೆಳಗಾವಿ-ಮೀರಜ್ ನಡುವೆ ದಿನಕ್ಕೆ ಎರಡು ಬಾರಿ ವಿಶೇಷ ರೈಲು ಸಂಚಾರ ನಡೆಸಲಿದೆ.

ರೈಲು ವೇಳಾಪಟ್ಟಿ:

ಬೆಳಗಾವಿ-ಮೀರಜ್ ರೈಲು ಆ-01 (07301) ಮುಂಜಾನೆ 6 ಗಂಟೆಗೆ ಬೆಳಗಾವಿ ನಿಲ್ದಾಣದಿಂದ ಹೊರಟು ಬೆಳಿಗ್ಗೆ. 9ಕ್ಕೆ ಮೀರಜ್ ನಿಲ್ದಾಣ ತಲುಪಲಿದೆ.
ಮೀರಜ್-ಬೆಳಗಾವಿ ರೈಲು ಸಂಖ್ಯೆ (07302) ಮುಂಜಾನೆ 9.50ಕ್ಕೆ ಮೀರಜ್​ನಿಂದ ಹೊರಟು ಮಧ್ಯಾಹ್ನ 12.50 ಕ್ಕೆ ಬೆಳಗಾವಿ ನಿಲ್ದಾಣ ತಲುಪಲಿದೆ.
ಬೆಳಗಾವಿ-ಮೀರಜ್ ರೈಲು ಆ.01ರ ಮಧ್ಯಾಹ್ನ 01.30 ಗಂಟೆಗೆ ಬೆಳಗಾವಿ ನಿಲ್ದಾಣದಿಂದ ಹೊರಟು ಸಂಜೆ 04.30ಕ್ಕೆ ಮೀರಜ್ ತಲುಪಲಿದೆ.
ಮೀರಜ್-ಬೆಳಗಾವಿ ರೈಲು ಆ.01 ಸಂಜೆ 05.35 ಕ್ಕೆ ಮೀರಜ್​ನಿಂದ ಹೊರಟು ರಾತ್ರಿ 08.35 ಕ್ಕೆ ಬೆಳಗಾವಿ ನಿಲ್ದಾಣ ತಲುಪಲಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button