Belagavi NewsBelgaum NewsKarnataka News
*ಬೆಳಗಾವಿ ಸೇರಿದಂತೆ 10 ಮಹಾನಗರ ಪಾಲಿಕೆಗಳಿಂದ ಬಂದ್ ಗೆ ಕರೆ: ಮುಷ್ಕರಕ್ಕೆ ನಿರ್ಧಾರ*

ಪ್ರಗತಿವಾಹಿನಿ ಸುದ್ದಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯದ 10 ಮಹಾನಗರ ಪಾಲಿಕೆಗಳು ಬಂದ್ ಗೆ ಕರೆ ನೀಡಲಾಗಿದ್ದು, ಮುಷ್ಕರಕ್ಕೆ ನಿರ್ಧರಿಸಲಾಗಿದೆ.
ಜುಲೈ 8ರಂದು ರಾಜ್ಯದ 10 ಮಹಾನಗರ ಪಾಲಿಕೆಗಳು ಸಂಪೂರ್ಣ ಬಂದ್ ಆಗಲಿದ್ದು, ಪಾಲಿಕೆಗಳ ನೌಕರರು ಸಾಮೂಹಿಕವಾಗಿ ರಜೆ ಹಾಕಿ ಪ್ರತಿಭಟನೆ ನಡೆಸಲಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಬೆಳಗಾವಿ ಮಹಾನಗರ ಪಾಲಿಕೆ, ಬಿಬಿಎಂಪಿ ಸೇರಿದಂತೆ ರಾಜ್ಯದ 10 ಮಹಾನಗರ ಪಾಲಿಕೆ ನೌಕರರು ಮುಷ್ಕರ ನಡೆಸಲಿದ್ದು, ಜುಲೈ 8ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.