Latest

ಬೆಳಗಾವಿ ನೈತಿಕ ಪೊಲೀಸ್ ಗಿರಿ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಳಗಾವಿಯಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಹೆಚ್ಚುತ್ತಿದ್ದು, ಇಂದು ಒಂದೇ ದಿನ ಮೂರು ಪ್ರಕರಣ ಬೆಳಕಿಗೆ ಬಂದಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಅರಗ ಜ್ಞಾನೇಂದ್ರ, ಬೆಳಗಾವಿ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣದ ಬಗ್ಗೆ ವರದಿಯಾಗಿದೆ. ಈಗಾಗಲೇ ಒಂದು ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

Home add -Advt

ನೈತಿಕ ಪೊಲೀಸ್ ಗಿರಿ ಪ್ರಕರಣ ಸಹಿಸಲು ಸಾಧ್ಯವಿಲ್ಲ. ಇಂಥ ಘಟನೆಗಳು ನಡೆದಾಗ ಪೊಲೀಸರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಾಗ ಒಂದು ಸಂದೇಶ ರವಾನೆಯಾಗುತ್ತೆ. ಆಗ ಇಂಥ ಪ್ರಕರಣಗಳು ಕಡಿಮೆಯಾಗುತ್ತವೆ. ಇಲ್ಲಿ ಯಾವುದೇ ಧರ್ಮ ಎಂದಲ್ಲ, ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಕ್ರಮ ಜರುಗಿಸುವುದು ಅಗತ್ಯ ಎಂದು ಹೇಳಿದರು.

ಬೆಳಗಾವಿಯಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ; ಮೂವರ ಬಂಧನ

Related Articles

Back to top button