Belagavi NewsBelgaum NewsKannada NewsKarnataka NewsLatest
*BREAKING ಬೆಳಗಾವಿ: ಉಪ್ಪಿಟ್ಟು ಸೇವಿಸಿದ್ದ ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ: ಇಬ್ಬರ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಬೆಳಗಿನ ಉಪಹಾರಕ್ಕೆ ಉಪ್ಪಿಟ್ಟು ಸೇವಿಸಿದ್ದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಇಲ್ಲಿನ ಚಿಕ್ಕೋಡಿ ತಾಲೂಕಿನ ಹಿರೇಕೋಡಿಯಲ್ಲಿರುವ ಮೊರಾರ್ಜಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಬೆಳಿಗ್ಗೆ ತಿಂಡಿಗಾಗಿ ವಿದ್ಯಾರ್ಥಿಗಳಿಗೆ ಉಪ್ಪಿಟ್ಟು ನೀಡಲಾಗಿತ್ತು. ಉಪ್ಪಿಟ್ಟು ಸೇವಿಸಿದ ಕೆಲ ಸಮಯದಲ್ಲಿಯೇ 30 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ.
ಅಸ್ವಸ್ಥ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಇಬ್ಬರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದ್ದು, ಐಸಿಯುಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿದೆ.