Belagavi NewsBelgaum News

*ಬೆಳಗಾವಿ ನೂತನ ಜಿಲ್ಲಾಧಿಕಾರಿಯಾಗಿ ಮೊಹ್ಮದ್ ರೋಷನ್ ನೇಮಕ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ನೂತನ ಜಿಲ್ಲಾಧಿಕಾರಿಯಾಗಿ ರಾಜ್ಯ ಸರ್ಕಾರ ಮೊಹ್ಮದ್ ರೋಷನ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

Home add -Advt

ಕಳೆದ ಎರಡು ವರ್ಷಗಳಿಂದ ಬೆಳಗಾವಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ನಿತೇಶ್ ಪಾಟೀಲ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ನಿತೇಶ್ ಪಾಟೀಲ್ ಅವರ ಸ್ಥಾನಕ್ಕೆ ಮೊಹ್ಮದ್ ರೋಷನ್ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಇದೇ ವೇಳೆ ಮೈಸೂರು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ಮೈಸೂರು ಜಿಲ್ಲಾಧಿಕಾರಿಯಾಗಿ ಲಕ್ಷ್ಮೀಕಾಂತ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ. ಲಕ್ಷ್ಮೀಕಾಂತ್ ರೆಡ್ಡಿ ಮೈಸೂರು ಪಾಲಿಕೆ ಆಯುಕ್ತರಾಗಿದ್ದರು.

ಒಟ್ಟು 21 ಐಎಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.


Related Articles

Back to top button