Advertisement -Home Add

ದೇವಸ್ಥಾನ ನಿರ್ಮಾಣಕ್ಕೆ 6 ಲಕ್ಷ ರೂ. ಅರ್ಪಣೆ: ಕಾಮಗಾರಿಗೆ ಗುದ್ದಲಿ ಪೂಜೆ

 ಲಕ್ಷ್ಮಿ ಹೆಬ್ಬಾಳಕರ್ ಶಾಸಕರ ನಿಧಿಯಿಂದ ಕೊಡುಗೆ

 ಲಕ್ಷ್ಮಿ ಹೆಬ್ಬಾಳಕರ್ ಶಾಸಕರ ನಿಧಿಯಿಂದ ಕೊಡುಗೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರು ಕ್ಷೇತ್ರದ ವಿವಿಧ ದೇವಸ್ಥಾನಗಳ ನಿರ್ಮಾಣ ಮತ್ತು ಜೀರ್ಣೋದ್ಧಾರಕ್ಕೆ ತಮ್ಮ ಶಾಸಕರ ನಿಧಿಯಿಂದ ಕೊಡುಗೆಗಳನ್ನು ನೀಡುತ್ತಿದ್ದು, ಭಾನುವಾರ 2 ದೇವಸ್ಥಾನಗಳಿಗೆ ತಲಾ 3 ಲಕ್ಷ ರೂ. ನೀಡಲಾಯಿತು.
ಕ್ಷೇತ್ರದ ಕುಕಡೊಳ್ಳಿ ಗ್ರಾಮದ ಎಸ್ ಸಿ ಕಾಲೋನಿಯಲ್ಲಿ ಶ್ರೀ ದುರ್ಗಾದೇವಿ ಮಂದಿರ ನಿರ್ಮಾಣ ಮತ್ತು ಶ್ರೀ ಬೀರದೇವರ ಮಂದಿರ ನಿರ್ಮಾಣಕ್ಕೆ ಚೆಕ್ ಮೂಲಕ ಹಣ ಹಸ್ಥಾಂತರಿಸಲಾಯಿತು. ಲಕ್ಷ್ಮಿ ಹೆಬ್ಬಾಳಕರ್ ಅನುಪಸ್ಥಿತಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಯುವ ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ ಚೆಕ್ ನ್ನು ದೇವಸ್ಥಾನದ ಆಡಳಿತ ಮಂಡಳಿಗೆ ನೀಡಿದರು. ನಂತರ ದೇವಸ್ಥಾನಗಳ ಕಾಮಗಾರಿಗಳಿಗೆ ಗುದ್ದಲಿ ಪೂಜೆಯನ್ನು ಸಹ ನೆರವೇರಿಸಿದರು.
ದೇವಸ್ಥಾನ ನಿರ್ಮಾಣಕ್ಕೆ ನೆರವು ನೀಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಗ್ರಾಮಸ್ಥರು ಕೃತಜ್ಞತೆ ವ್ಯಕ್ತಪಡಿಸಿದರು. ಗ್ರಾಮಸ್ಥರ ಹಲವು ಕಾಲದ ನಿರೀಕ್ಷೆ ಈಡೇರಿದೆ ಎಂದು ಹರ್ಷ ವ್ಯಕ್ತಪಡಿಸಿದರು. ಇದೇ ವೇಳೆ ಚನ್ನರಾಜ ಹಟ್ಟಿಹೊಳಿ ಅವರನ್ನು ದೇವಸ್ಥಾನಗಳ ಸಮಿತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮಸ್ಥರು, ಸಿ ಸಿ‌ ಪಾಟೀಲ, ಸುರೇಶ ಇಟಗಿ, ಗೌಸಮೊದ್ದಿನ ಜಾಲಿಕೊಪ್ಪ, ಈರಣ್ಣ‌ ಪಾಟೀಲ, ಮಂಜುನಾಥ ಹುಬ್ಬಳ್ಳಿ, ಬಸನಗೌಡ ಪಾಟೀಲ, ದೇವಸ್ಥಾನದ ಕಮೀಟಿಯವರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.