Advertisement -Home Add

ಶಾಸಕ ಅಭಯ ಪಾಟೀಲ ಅವರಿಗೆ ಕೊರೋನಾ ಪಾಸಿಟಿವ್

ಹೋಮ್ ಕ್ವಾರಂಟೈನ್ ಆದ ಶಾಸಕ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಅವರಿಗೂ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.

ಈ ಕುರಿತು ಸೆಲ್ಫಿ ವೀಡಿಯೋ ಹಂಚಿಕೊಂಡಿರುವ ಅವರು ಈ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದಿದ್ದಾರೆ.

ವೈದ್ಯರ ಸಲಹೆ ಮೇರೆಗೆ ಪರೀಕ್ಷೆ ಮಾಡಿಸಿಕೊಂಡಿದ್ದೇನೆ. ಕೊರೋನಾ ಪಾಸಿಟಿವ್ ಬಂದಿದೆ. ಹಾಗಾಗಿ ಹೋಮ್ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಯಾರೂ ಆತಂಕಪಡಬೇಕಿಲ್ಲ ಎಂದು ತಿಳಿಸಿದ್ದಾರೆ.

ಎಲ್ಲರೂ ಎಚ್ಚರಿಕೆಯಿಂದಿದ್ದು, ಸರಕಾರದ ನಿಯಮಗಳನ್ನು ಪಾಲಿಸುವ ಮೂಲಕ ಕೊರೋನಾ ಮುಕ್ತ ಭಾರತ ಮಾಡಲು ಎಲ್ಲರೂ ಸಹಕರಿಸಬೇಕು ಎಂದು ಕೋರಿರುವ ಅವನರು, ತಮ್ಮೊಂದಿಗೆ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ವಿನಂತಿಸಿದ್ದಾರೆ.