Advertisement -Home Add

ಡಿಸಿಸಿ ಬ್ಯಾಂಕ್ ಚುನಾವಣೆ: 4 ಗಂಟೆಗೆ ಮಹತ್ವದ ಪತ್ರಿಕಾಗೋಷ್ಠಿ

ಹಲವಾರು ಗಣ್ಯರಿಂದ ನಾಮಪತ್ರ ಸಲ್ಲಿಕೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ( ಡಿಸಿಸಿ) ಚುನಾವಣೆ ಕುತೂಹಲ ಘಟ್ಟ ತಲುಪಿದ್ದು, ಇಂದು ನಾಮಪತ್ರ ಸಲ್ಲಿಸುವ ಕೊನೆಯ ದಿನವಾಗಿದ್ದರಿಂದ ಹಲವಾರು ಘಟಾನುಘಟಿ ನಾಯಕರು ನಾಮಪತ್ರ ಸಲ್ಲಿಸಿದ್ದಾರೆ.

ಈ ಮಧ್ಯೆ ಇಂದು ಸಂಜೆ 4 ಗಂಟೆಗೆ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಮತ್ತು ಮಾಜಿ ಸಚಿವ ಉಮೇಶ ಕತ್ತಿ ಪತ್ರಿಕಾಗೋಷ್ಠಿ ಕರೆದಿದ್ದು, ತೀವ್ರ ಕುತೂಹಲ ಮೂಡಿಸಿದೆ.

ಇಂದು ಬೆಳಗ್ಗೆ ಹಾಲಿ ಅಧ್ಯಕ್ಷ ರಮೇಶ ಕತ್ತಿ, ಸಂಸದ ಅಣ್ಣಾ ಸಾಹೇಬ ಜೊಲ್ಲೆ, ಶಾಸಕರಾದ ಆನಂದ ಮಾಮನಿ, ಅಂಜಲಿ ನಿಂಬಾಳಕರ್, ಮಹಾಂತೇಶ ದೊಡ್ಡಗೌಡರ್, ಮಾಜಿ ಶಾಸಕ ಅರವಿಂದ ಪಾಟೀಲ ಸೇರಿದಂತೆ ಅನೇಕರು ನಾಮಪತ್ರ ಸಲ್ಲಿಸಿದ್ದಾರೆ.

ಎಲ್ಲ 16 ಕ್ಷೇತ್ರಗಳಿಗೂ ಅವಿರೋಧ ಆಯ್ಕೆ ಮಾಡುವ ಪ್ರಯತ್ನ ಮುಂದುವರಿದಿದ್ದು, ನಾಮಪತ್ರ ವಾಪಸ್ ಪಡೆಯುವ ದಿನಾಂಕದವರೆಗೂ ಕಾದು ನೋಡಬೇಕಿದೆ.

ಎಲ್ಲ ಕ್ಷೇತ್ರಗಳಿಗೂ ಅವಿರೋಧ ಆಯ್ಕೆ ಮಾಡುವ ಪ್ರಯತ್ನ ಯಶಸ್ವಿಯಾಗಿದೆ ಎಂದು ಹಾಲಿ ಅಧ್ಯಕ್ಷ ರಮೇಶ ಕತ್ತಿ ಹೇಳಿದ್ದಾರೆ. ಶಾಸಕಿ ಅಂಜಲಿ ನಿಂಬಾಳಕರ್ ಇದೇ ಮೊದಲ ಬಾರಿಗೆ ಸಹಕಾರಿ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಲು ಮುಂದಾಗಿದ್ದು, ಸಂದಾನದ ವೇಳೆ ಉಳಿಯುತ್ತಾರೋ, ನಾಮಪತ್ರ ಹಿಂದಕ್ಕೆ ಪಡೆಯುತ್ತಾರೋ ಕಾದು ನೋಡಬೇಕಿದೆ.

ಸಂಜೆ 4 ಗಂಟೆಗೆ ಬಾಲಚಂದ್ರ ಜಾರಕಿಹೊಳಿ ಮತ್ತು ಉಮೇಶ ಕತ್ತಿ ನಡೆಸಲಿರುವ ಪತ್ರಿಕಾಗೋಷ್ಠಿ ಕುತೂಹಲ ಮೂಡಿಸಿದ್ದು, ಅವಿರೋಧ ಆಯ್ಕೆ ಘೋಷಿಸುತ್ತಾರೋ, ಚುನಾವಣೆ ಅನಿವಾರ್ಯ ಎನ್ನುತ್ತಾರೋ ಕಾದು ನೋಡಬೇಕಿದೆ. ಕೇವಲ ಒಂದೇ ಬಣದಿಂದ ಪತ್ರಿಕಾಗೋಷ್ಠಿ ನಡೆಯುತ್ತಿರುವುದು ಕುತೂಹಲ ಹೆಚ್ಚಿಸಿದೆ.

 

ಬೆಳಗಾವಿ ಡಿಸಿಸಿ ಬ್ಯಾಂಕ್ ಎಲೆಕ್ಷನ್ ಗೆ ಕಾಂಗ್ರೆಸ್ ಎಂಟ್ರಿ: ಬಿಗ್ ಟ್ವಿಸ್ಟ್ -Exclusive

ಡಿಸಿಸಿ ಬ್ಯಾಂಕ್ ಚುನಾವಣೆ: ಮಂಗಳವಾರ ಸಂಜೆ ಮಹತ್ವದ ಸಭೆ