Advertisement -Home Add

ಮನೆ ಕಳೆದುಕೊಂಡವರಿಗೆ ಪರಿಹಾರದ ಚೆಕ್ ವಿತರಣೆ

ಮುಖ್ಯಮಂತ್ರಿಗಳ ಪರಿಹಾರನಿಧಿ ಕೊಡಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್

ಮುಖ್ಯಮಂತ್ರಿಗಳ ಪರಿಹಾರನಿಧಿ ಕೊಡಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್

 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಂಕಿ ಆಕಸ್ಮಿಕದಿಂದ ಮನೆ ಕಳೆದುಕೊಂಡಿರುವ ಹಲಗಾ ಗ್ರಾಮದ 5 ಕುಟುಂಬಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ಒಂದು ಲಕ್ಷ ರೂ. ಮಂಜೂರು ಮಾಡಿಸಿದ್ದಾರೆ.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಲಗಾ ಗ್ರಾಮದಲ್ಲಿ‌ 5 ತಿಂಗಳ ಹಿಂದೆ ಆಕಸ್ಮಿಕ ಬೆಂಕಿ ಅನಾಹುತಕ್ಕೆ 5 ಮನೆಗಳು ಆಹುತಿಯಾಗಿದ್ದವು. ಈ ಐದು ಮನೆಗಳ ಕುಟುಂಬಸ್ಥರ ಸಂಕಷ್ಟಗಳಿಗೆ ಸ್ಪಂದಿಸಿದ ಲಕ್ಷ್ಮಿ ಹೆಬ್ಬಾಳಕರ್, ಮುಖ್ಯಮಂತ್ರಿ ಯಡಿಯೂರಪ್ಪನವರ ಗಮನಕ್ಕೆ ತಂದು ಪ್ರತಿ ಕುಟುಂಬಕ್ಕೆ ತಲಾ 1 ಲಕ್ಷ ರೂಮಂಜೂರು ಮಾಡಿಸಿದ್ದಾರೆ.
ಹೆಬ್ಬಾಳಕರ್ ಅನುಪಸ್ಥಿತಿಯಲ್ಲಿ ಸ್ಥಳೀಯ ಜನ ಪ್ರತಿನಿಧಿಗಳು, ಯುವ ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ ಹಾಗೂ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರೆಲ್ಲರೂ ಸೇರಿ ಚೆಕ್ ಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿದರು.
ವಿಶೇಷ ಪ್ರಯತ್ನ ಮಾಡಿ ನೊಂದವರಿಗೆ ಸಹಾಯ ಮಾಡಿದ್ದಕ್ಕಾಗಿ ಗ್ರಾಮಸ್ಥರು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಗ್ರಾಮದ  ಹಿರಿಯರು,  ಸುಕುಮಾರ ಪಾಟೀಲ, ಮಹಾವೀರ ಬೆಲ್ಲದ, ಮಹಾವೀರ ಪಾಟೀಲ, ಶಾಂತು ಬೆಲ್ಲದ, ಕಿರಣ ಹನಮಂತಾಚೆ, ಸುಕುಮಾರ ಹುಡೆದ, ಸಿದ್ದು ತುರಂಗಿ, ಸಾಗರ ಕಾಮನಾಚೆ, ಜ್ಯೋತಿಬಾ ಚೌಗುಲೆ, ಪಿರಾಜಿ ಜಾಧವ್, ಬಾಳು ಕಾಮತಿ, ಪ್ರಶಾಂತ ಶಟವಾಜಿ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.